shimoga news | ಕುವೆಂಪು ವಿಶ್ವವಿದ್ಯಾಲಯದಲ್ಲಿ ಭಾರೀ ಅಕ್ರಮ : ಸಿಐಡಿ ತನಿಖೆಗೆ ಶಾಸಕ ಡಿ ಎಸ್ ಅರುಣ್ ಆಗ್ರಹ

d s arun

ಶಿವಮೊಗ್ಗ (shivamogga), ಅಕ್ಟೋಬರ್ 02: ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾದ ವಿವಿಧ ಅಕ್ರಮಗಳು ಹಾಗೂ ಅವ್ಯವಹಾರಗಳ ಕುರಿತಂತೆ ಸಿಐಡಿ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಶಾಸಕರು ಹಾಗೂ ಕುವೆಂಪು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾದ ಡಿ.ಎಸ್. ಅರುಣ್ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಅಕ್ಟೋಬರ್ 2 ರಂದು ಅವರು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮಾರ್ಕ್ಸ್‌ ಕಾರ್ಡ್‌ಗಳಲ್ಲಿ ಹೆಚ್ಚುವರಿ ಅಂಕಗಳನ್ನು ನೀಡಿರುವುದು, ಅಂಕಗಳ ಪರಿಷ್ಕರಣೆ ಹಾಗೂ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿರುವುದು ಸೇರಿದಂತೆ ಹಲವು ಗಂಭೀರ ಆರೋಪಗಳು ಕೇಳಿಬರುತ್ತಿವೆ.

ಇದರ ಜೊತೆಗೆ ಆಡಳಿತಾತ್ಮಕ ನಿರ್ಧಾರಗಳು, ಹಣಕಾಸು ವ್ಯವಹಾರಗಳು, ಖರೀದಿ ಹಾಗೂ ಟೆಂಡರ್ ಪ್ರಕ್ರಿಯೆಗಳಲ್ಲಿಯೂ ಅಕ್ರಮಗಳ ಆರೋಪಗಳಿದ್ದು, ಈ ಎಲ್ಲ ವಿಚಾರಗಳ ಸತ್ಯಾಸತ್ಯತೆ ತನಿಖೆಯಿಂದ ಹೊರಬರಬೇಕಿದೆ ಎಂದು ಹೇಳಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಸಂಬಂಧಿಸಿದ ಅಂಕಪಟ್ಟಿಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯುವುದು ಗಂಭೀರ ವಿಚಾರ. ಇದರಿಂದ ಅರ್ಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಸಾಧ್ಯತೆಯಿರುವುದರಿಂದ, ಹೆಚ್ಚುವರಿ ಅಂಕಗಳನ್ನು ನೀಡಿರುವ ಆರೋಪ ಸೇರಿದಂತೆ ವಿಶ್ವವಿದ್ಯಾಲಯದ ವಿವಿಧ ಅಕ್ರಮಗಳ ಕುರಿತು ದಾಖಲೆಗಳನ್ನು ಪರಿಶೀಲಿಸಿ, ಹೊಣೆಗಾರರು ಹಾಗೂ ತಪ್ಪಿತಸ್ಥರನ್ನು ಗುರುತಿಸಬೇಕು ಎಂದು ಅವರು ಒತ್ತಾಯಿಸಿದರು.

ವಿಶ್ವವಿದ್ಯಾಲಯದ ಶೈಕ್ಷಣಿಕ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನಿಯಮಬದ್ಧತೆ ಮತ್ತು ವಿಶ್ವಾಸವನ್ನು ಕಾಪಾಡುವ ನಿಟ್ಟಿನಲ್ಲಿ ಸಿಐಡಿ ತನಿಖೆಗೆ ಸರ್ಕಾರ ಮುಂದಾಗಬೇಕು. ತನಿಖೆಯಲ್ಲಿ ಅಕ್ರಮಗಳು ದೃಢಪಟ್ಟರೆ, ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಡಿ.ಎಸ್. ಅರುಣ್ ಆಗ್ರಹಿಸಿದ್ದಾರೆ.

ಗೋಷ್ಠಿಯಲ್ಲಿ ಬಿಜೆಪಿ ಪಕ್ಷದ ರಾಜ್ಯ ಸಂಯೋಜಕರಾದ ದತ್ತಾತ್ರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಜಿಲ್ಲಾ ಮಾಧ್ಯಮ ಪ್ರಮುಖ್ ಚಂದ್ರಶೇಖರ್, ಮಂಜುನಾಥ್ ಹಾಗೂ ಈಶ್ವರಪ್ಪ ಮೊದಲಾದವರಿದ್ದರು.

Major Irregularities at Kuvempu University: MLC D.S. Arun Demands CID Probe | Shivamogga, October 2: D.S. Arun, a Member of the Legislative Council (MLC) and a member of the Kuvempu University Academic Council, has urged the state government to order a CID investigation into the alleged irregularities and malpractices at Kuvempu University. He addressed a press conference in Shivamogga on October 2.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *