shimoga news | ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ಗುಂಡಿ ಗಂಡಾಂತರಕ್ಕೆ ಮುಕ್ತಿ..!

shimoga highway

ಶಿವಮೊಗ್ಗ (shivamogga), ಅಕ್ಟೋಬರ್ 05: ಶಿವಮೊಗ್ಗ ನಗರದ ಗಾಡಿಕೊಪ್ಪದ ನಂಜಪ್ಪ ಲೈಫ್ ಕೇರ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿದ್ದ ಗುಂಡಿ – ಗೊಟರುಗಳನ್ನು, ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರ ಮುಚ್ಚಿದೆ.

ಕಳೆದ ಹಲವು ದಿನಗಳಿಂದ ಹೆದ್ದಾರಿಯಲ್ಲಿ ಗುಂಡಿ – ಗೊಟರುಗಳು ಬಿದ್ದಿದ್ದವು. ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗಿ ಪರಿಣಮಿಸಿತ್ತು. ಅದರಲ್ಲಿಯೂ ದ್ವಿಚಕ್ರ ವಾಹನ ಸವಾರರು ತೀವ್ರ ತೊಂದರೆ ಪಡುವಂತಾಗಿತ್ತು. ಗುಂಡಿ – ಗೊಟರುಗಳ ಕಾರಣದಿಂದ ಅಪಘಾತಗಳು ಸಂಭವಿಸುತ್ತಿದ್ದವು.

ಈ ಕುರಿತಂತೆ ‘ಉದಯ ಸಾಕ್ಷಿ’ ಡಿಜಿಟಲ್ ನ್ಯೂಸ್ ವರದಿ ಪ್ರಕಟಿಸಿತ್ತು. ವರದಿ ಪ್ರಕಟಗೊಂಡ ಬೆನ್ನಲ್ಲೆ, ಹೆದ್ದಾರಿಯಲ್ಲಿ ಬಿದ್ದಿದ್ದ ಗುಂಡಿ – ಗೊಟರುಗಳನ್ನು ಮುಚ್ಚಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದಾರೆ.

Shivamogga, October 5: The National Highways Authority has recently filled the potholes and craters on the national highway near Nanjappa Life Care in the Gadikoppa area of ​​Shivamogga city.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *