shimoga news | ಶಿವಮೊಗ್ಗ : ತಾಯಿ – ಮಗನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ!

shimoga court building

ಶಿವಮೊಗ್ಗ (shivamogga), ಅಕ್ಟೋಬರ್ 07: ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ, ತಾಯಿ ಹಾಗೂ ಮಗನಿಗೆ ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 2.24 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ದಯಾನಂದ್ (37) ಹಾಗೂ ಅವರ ತಾಯಿ ಸುಮಿತ್ರ (65) ಜೈಲು ಶಿಕ್ಷೆಗೊಳಗಾದವರು ಎಂದು ಗುರುತಿಸಲಾಗಿದೆ. ನ್ಯಾಯಾಧೀಶರಾದ ಯಶವಂತ ಕುಮಾರ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಮಮತಾ ಬಿ ಎಸ್ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ : ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ನಿವಾಸಿಯಾದ ಜ್ಯೋತಿ (24) ಎಂಬುವರು ಅಪರಾಧಿ ದಯಾನಂದ್ ಅವರ ಪತ್ನಿಯಾಗಿದ್ದರು.

ದಯಾನಂದ್ ಹಾಗೂ ತಾಯಿ ಸುಮಿತ್ರ ಅವರು, ಹೆಚ್ಚಿನ ವರದಕ್ಷಿಣೆ ತರುವಂತೆ ಜ್ಯೋತಿ ಅವರಿಗೆ ದೈಹಿಕ – ಮಾನಸಿಕ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಜ್ಯೋತಿ ಅವರು 23-05-2021 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ವರದಕ್ಷಿಣೆ ಸಾವು ಹಾಗೂ ವರದಕ್ಷಿಣೆ ಕಿರುಕುಳದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಅಂದಿನ ಡಿವೈಎಸ್ಪಿ ಶಾಂತವೀರ್ ಅವರು ಪ್ರಕರಣದ ತನಿಖೆ ನಡೆಸಿದ್ದರು. ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

Shivamogga: Mother and son sentenced to 10 years of rigorous imprisonment! | Shivamogga October 07: In a dowry harassment case, the 3rd Additional District and Sessions Court in Shivamogga has sentenced a mother and son to 10 years of rigorous imprisonment and imposed a fine of ₹2.24 lakh.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *