shimoga news | ಶಿವಮೊಗ್ಗ ತಾಲೂಕಿನ 22 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!

shimoga court judgement news

ಶಿವಮೊಗ್ಗ (shivamogga), ಅಕ್ಟೋಬರ್ 10: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ – 1) ತೀರ್ಪು ನೀಡಿದೆ.

ಶಿವಮೊಗ್ಗ ತಾಲೂಕಿನ ನಿವಾಸಿಯಾದ 22 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದವನು. ಜೈಲು ಶಿಕ್ಷೆಯ ಜೊತೆಗೆ ಅಪರಾಧಿಗೆ 1.10 ಲಕ್ಷ ರೂ. ದಂಡ ವಿಧಿಸಲಾಗಿದೆ. ಹಾಗೆಯೇ ನೊಂದ ಬಾಲಕಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ : ಶಿವಮೊಗ್ಗ ತಾಲೂಕಿನ ಗ್ರಾಮವೊಂದರ ನಿವಾಸಿಯಾದ ಯುವಕನು, 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಅಂದಿನ ಇನ್ಸ್’ಪೆಕ್ಟರ್ ಆಗಿದ್ದ ಮಂಜುನಾಥ್ ಬಿ ಅವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

20 Years of Rigorous Imprisonment for 22-Year-Old Youth from Shivamogga Taluk! | Shivamogga, October 10: The Shivamogga Additional District and Sessions Court (FTSC-1) has sentenced a 22-year-old youth to 20 years of rigorous imprisonment for sexually assaulting a minor girl.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *