ಕಂದುರೋಗ (ಬ್ರುಸೆಲೋಸಿಸ್) ದ ವಿರುದ್ಧ ಲಸಿಕೆ ಹಾಕಿಸಿ ಜಾನುವಾರುಗಳ ರಕ್ಷಣೆಗೆ ಪಶು ವೈದ್ಯಕೀಯ ಇಲಾಖೆ ಮನವಿ

ಶಿವಮೊಗ್ಗ, ಮೇ 10: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದುರೋಗ ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ ಬಿ ಯಲಿ ತಿಳಿಸಿದ್ದಾರೆ. ಕಂದುರೋಗವು ಪ್ರಾಣಿಜನ್ಯರೋಗವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭ ಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭ ಸ್ರಾವದಿಂದ ಮತ್ತು ಹಸಿ ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಸದರಿ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ, ಮೇ 10: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣದಡಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಿಗೆ ಕಂದುರೋಗ ನಿಯಂತ್ರಣಕ್ಕೆ ಲಸಿಕೆ ಹಾಕುವ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ ಬಿ ಯಲಿ ತಿಳಿಸಿದ್ದಾರೆ.

ಕಂದುರೋಗವು ಪ್ರಾಣಿಜನ್ಯರೋಗವಾಗಿದೆ. ರಾಸುಗಳಲ್ಲಿ ಈ ರೋಗದಿಂದ ಗರ್ಭ ಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಕರು ಹಾಕಬಹುದು. ಅವುಗಳ ಗರ್ಭ ಸ್ರಾವದಿಂದ ಮತ್ತು  ಹಸಿ  ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ, ಸದರಿ ರೋಗವು ಮನುಷ್ಯರಿಗೂ ಹರಡಬಹುದು. ಸದರಿ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಲಸಿಕಾ ಕಾರ್ಯಕ್ರಮದಡಿ 4 ರಿಂದ 8 ತಿಂಗಳ ಆಕಳು/ಎಮ್ಮೆಗಳ ಹೆಣ್ಣು ಕರುಗಳಿಗೆ ಲಸಿಕೆ 15-05-2023 ರಿಂದ 30-05-2023 ರವರೆಗೆ ಲಸಿಕೆ ಹಾಕಲಾಗುತ್ತದೆ. 2023-24 ನೇ ಸಾಲಿನಲ್ಲಿವಾರ್ಷಿಕ ಒಟ್ಟು 75,000 ಹೆಣ್ಣು ಕರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ಈ ಸುತ್ತಿನಲ್ಲಿ 25,000 ಹೆಣ್ಣು ಕರುಗಳಿಗೆ ಲಸಿಕೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.

ಲಸಿಕಾದಾರರು ತಮ್ಮ ಮನೆ ಬಾಗಿಲಲ್ಲೇ ಕರುಗಳಿಗೆ, ಕಿವಿಯೋಲೆ ಅಳವಡಿಸಿ ನೊಂದಣಿ ಮಾಡಿಕೊಂಡು ಲಸಿಕೆ ಹಾಕುತ್ತಾರೆ. ಪಶು ಪಾಲಕರು ಹೆಣ್ಣು ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ಕಂದು ರೋಗ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲೂಕುವಾರು, ಗ್ರಾಮವಾರು ತಯಾರಿಸಲಾಗಿದೆ. ಪಶುಪಾಲನಾ ಇಲಾಖೆ ಅಧಿಕಾರಿ/ಸಿಬ್ಬಂದಿಯನ್ನೊಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ಚಿಕಿತ್ಸಾ ಸಂಸ್ಥೆಗಳನ್ನು ಸಂಪರ್ಕಿಸಬೇಕೆಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ.ಬಿ.ಯಲಿ ಅವರು ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *