shimoga court news | ಬಾಲಕಿಗೆ ಕಿರುಕುಳ : ಯುವಕನಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ!

shimoga court judgement news

ಶಿವಮೊಗ್ಗ (shivamogga), ಅಕ್ಟೋಬರ್ 15: ಮಾನಸಿಕ ಅಸ್ವಸ್ಥ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ, 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

27 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದವನು. ಅಪರಾಧಿಗೆ 50 ಸಾವಿರ ರೂ. ದಂಡ ಕೂಡ ವಿಧಿಸಲಾಗಿದೆ. ನೊಂದ ಬಾಲಕಿಗೆ 40 ಸಾವಿರ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ : ಸೊರಬ ತಾಲೂಕು ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶವೊಂದರಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಕುರಿತಂತೆ ಸಬ್ ಇನ್ಸ್’ಪೆಕ್ಟರ್ ರಾಜುರೆಡ್ಡಿ ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

Harassment of a Girl: Youth Sentenced to 3 Years of Rigorous Imprisonment! | Shivamogga, October 15: The Additional District and Sessions Court in Shivamogga has sentenced a youth to 3 years of rigorous imprisonment for sexually harassing a mentally challenged girl. The individual sentenced is a 27-year-old man. The court has also imposed a fine of Rs 50,000 on the convict and ordered that Rs 40,000 be paid as compensation to the victim.

 

 

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *