thirthahalli news | ತೀರ್ಥಹಳ್ಳಿ : ಹಣಗೆರೆಕಟ್ಟೆ ದೇವಾಲಯಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ -12 ಜನರಿಗೆ ಗಾಯ!

ತೀರ್ಥಹಳ್ಳಿ (thirthahalli), ಅಕ್ಟೋಬರ್ 25: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆ ದೇವಾಲಯಕ್ಕೆ ತೆರಳುತ್ತಿದ್ದ ಟಾಟಾ ಏಸ್ ವಾಹನವೊಂದು ಪಲ್ಟಿಯಾಗಿ ಬಿದ್ದ ಪರಿಣಾಮ, ಅದರಲ್ಲಿ ಪ್ರಯಾಣಿಸುತ್ತಿದ್ದ 12 ಜನರು ಗಾಯಗೊಂಡ ಘಟನೆ ಅಕ್ಟೋಬರ್ 25 ರ ಬೆಳಿಗ್ಗೆ ನಡೆದಿದೆ.

ಗಾಯಾಳುಗಳು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನವರಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಇಬ್ಬರಿಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಟಾಟಾ ಏಸ್ ವಾಹನದಲ್ಲಿ ಹಣಗೆರೆಕಟ್ಟೆ ದೇವಾಲಯಕ್ಕೆ ಆಗಮಿಸುತ್ತಿದ್ದ ವೇಳೆ, ಕಲ್ಲುಕೊಪ್ಪ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ವಾಹನ ಪಲ್ಟಿಯಾಗಿ ಬಿದ್ದಿದೆ. ತಕ್ಷಣವೇ ಸ್ಥಳೀಯರು ಗಾಯಾಳುಗಳ ನೆರವಿಗೆ ಧಾವಿಸಿ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಘಟನಾ ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

Thirthahalli, October 25: On the morning of October 25 a Tata Ace vehicle—en route to the Hanagerekatte Temple in Thirthahalli taluk Shivamogga district—overturned leaving 12 passengers injured.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *