ಶಿವಮೊಗ್ಗ (shivamogga), ಅಕ್ಟೋಬರ್ 27: ಬಟ್ಟೆಗೆ ಇಸ್ತ್ರಿ ಮಾಡುವ ವೇಳೆ ವಿದ್ಯುತ್ ಶಾಕ್ ನಿಂದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಶಿವಮೊಗ್ಗ ನಗರದ ವಾದಿ ಎ ಹುದಾ ಬಡಾವಣೆಯಲ್ಲಿ ಅಕ್ಟೋಬರ್ 26 ರಂದು ನಡೆದಿದೆ.
ಉಮರ್ ಫಾರೂಕ್ (14) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಈತ 9 ನೇ ತರಗತಿ ಅಭ್ಯಾಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಮನೆಯಲ್ಲಿ ಬಟ್ಟೆಗೆ ಇಸ್ತ್ರಿ ಮಾಡುವ ವೇಳೆ, ಆಕಸ್ಮಿಕವಾಗಿ ವಿದ್ಯುತ್ ಶಾಕ್ ಗೆ ಬಾಲಕ ತುತ್ತಾಗಿದ್ದಾನೆ. ಈತನನ್ನು ಕುಟುಂಬದವರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲಿಸಿದ್ದಾರೆ.
Shivamogga: Electric shock while ironing clothes – Tragic end for a boy! | nShivamogga, October 27: A tragic incident occurred in the Wadi-e-Huda locality of Shivamogga city on October 26 where a boy died after receiving an electric shock while ironing clothes.

