ತೀರ್ಥಹಳ್ಳಿ (thirthahalli), ನವೆಂಬರ್ 01: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಯೋರ್ವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಕವರಿಹಕ್ಲು ಎಂಬಲ್ಲಿ ನವೆಂಬರ್ 01 ರ ಬೆಳಿಗ್ಗೆ ನಡೆದಿದೆ.
ಶಿವಮೊಗ್ಗ ಸರ್ಕಾರಿ ಮೆಡಿಕಲ್ ಕಾಲೇಜ್ ನಲ್ಲಿ ಎಂ.ಡಿ. ಅಭ್ಯಾಸ ಮಾಡುತ್ತಿದ್ದ ಚೇತನ್ (28) ಮೃತಪಟ್ಟವರೆಂದು ಗುರುತಿಸಲಾಗಿದೆ. ಘಟನೆಯಲ್ಲಿ ಇತರೆ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಐವರು ವಿದ್ಯಾರ್ಥಿಗಳು ಕಾರಿನಲ್ಲಿ ಪ್ರವಾಸಕ್ಕೆಂದು ಆಗಮಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ. ಘಟನಾ ಸ್ಥಳಕ್ಕೆ ಇನ್ಸ್’ಪೆಕ್ಟರ್ ರಾಜಶೇಖರ್, ಆಗುಂಬೆ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಶಿವನಗೌಡ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Thirthahalli, November 01: A medical college student died and four others sustained serious injuries after the car they were traveling in went out of the driver’s control and rammed into a mound of earth by the roadside. The incident occurred on the morning of November 01 at Kavarihaklu, near Agumbe in Thirthahalli taluk.

