thirthahalli news update | ಪ್ರಧಾನಿ ಟ್ವೀಟ್‌ನಲ್ಲಿ ಮಿಂಚಿದ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಶರಾವತಿ ಕಾಲೇಜಿನ ವಿದ್ಯಾರ್ಥಿನಿಯರು!

Students from Sharavathi College in Konanduru, Thirthahalli Taluk, Shine in the Prime Minister’s Tweet! | Shivamogga: Sixteen students from Sharavathi First Grade College in Konanduru, Thirthahalli Taluk, drew attention by performing Yakshagana at the National Unity Day (Rashtriya Ekta Diwas) celebrations held in Gujarat on November 1st. Prime Minister Narendra Modi expressed his appreciation for the Yakshagana performance presented by the students in his presence and shared a photograph of the performance on his official Twitter account.

ಶಿವಮೊಗ್ಗ (shimoga): ಗುಜರಾತ್‌ನಲ್ಲಿ ನವೆಂಬರ್ 1ರಂದು ನಡೆದ ರಾಷ್ಟ್ರೀಯ ಏಕತಾ ದಿನಾಚರಣೆಯ ರಾಷ್ಟ್ರೀಯೋತ್ಸವದಲ್ಲಿ ತೀರ್ಥಹಳ್ಳಿ ತಾಲ್ಲೂಕು ಕೋಣಂದೂರಿನ ಶರಾವತಿ ಪ್ರಥಮ ದರ್ಜೆ ಕಾಲೇಜಿನ 16 ವಿದ್ಯಾರ್ಥಿಗಳು ಯಕ್ಷಗಾನ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೀಡಿದ ಯಕ್ಷಗಾನ ಪ್ರದರ್ಶನಕ್ಕೆ ಪ್ರಧಾನಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಟ್ವಿಟರ್ ಖಾತೆಯಲ್ಲಿ ಪ್ರದರ್ಶನದ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ.

ಈ ಛಾಯಾಚಿತ್ರದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಾದ ಅಮೂಲ್ಯ, ವೈಶಾಲಿ ಮತ್ತು ನಿಶ್ಚಿತಾ ಅವರು ಕಾಣಿಸಿಕೊಂಡಿದ್ದಾರೆ. ರಾಷ್ಟ್ರಮಟ್ಟದ ವೇದಿಕೆಯಲ್ಲಿ ಮಲೆನಾಡಿನ ಸಾಂಪ್ರದಾಯಿಕ ಕಲೆಯಾದ ಯಕ್ಷಗಾನವನ್ನು ಪ್ರದರ್ಶಿಸಿ, ಪ್ರಧಾನಮಂತ್ರಿಗಳ ಮೆಚ್ಚುಗೆಗೆ ಪಾತ್ರವಾಗಿರುವುದು ಕಾಲೇಜಿಗೆ ಹೆಮ್ಮೆಯ ಸಂಗತಿಯಾಗಿದೆ.

ಪ್ರಧಾನಮಂತ್ರಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳ ಕಲಾಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿರುವುದಕ್ಕೆ ಎನ್ಇಎಸ್ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಚಾರ್ಯರು ಕೃತಜ್ಞತೆ ಸಲ್ಲಿಸಿದ್ದಾರೆ.

Students from Sharavathi College in Konanduru, Thirthahalli Taluk, Shine in the Prime Minister’s Tweet! | Shivamogga: Sixteen students from Sharavathi First Grade College in Konanduru, Thirthahalli Taluk, drew attention by performing Yakshagana at the National Unity Day (Rashtriya Ekta Diwas) celebrations held in Gujarat on November 1st. Prime Minister Narendra Modi expressed his appreciation for the Yakshagana performance presented by the students in his presence and shared a photograph of the performance on his official Twitter account.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *