shimoga news | ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ!

ಶಿವಮೊಗ್ಗ (shivamogga), ನವೆಂಬರ್ 05: ದೀಪಾವಳಿ ಹಬ್ಬದ ಪ್ರಯುಕ್ತ ಶಿವಮೊಗ್ಗ ಜಿಲ್ಲೆ ಹಾಗೂ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತಿರುವ ಪಟಾಕಿ ಮಾರಾಟ ಮಳಿಗೆಗಳು, ಪಟಾಕಿ ತಯಾರಿಕೆ, ಮಾರಾಟ ಹಾಗೂ ಇತರ ಪ್ರಕ್ರಿಯೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016 ರ ಪ್ರಕಾರ, 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ (ಪಟಾಕಿ ಮಾರಾಟ/ತಯಾರಿಕೆ ಸೇರಿದಂತೆ) ಕೆಲಸಕ್ಕೆ ನಿಯೋಜಿಸುವುದು ಕಾನೂನುಬಾಹಿರವಾಗಿದೆ.

ಒಂದು ವೇಳೆ ಪಟಾಕಿ ಮಳಿಗೆಗಳಲ್ಲಿ ಅಥವಾ ತಯಾರಿಕಾ ಘಟಕಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡಿರುವುದು ಕಂಡುಬಂದರೆ, ಸಂಬಂಧಪಟ್ಟ ಮಾಲೀಕರ ವಿರುದ್ಧ ಬಾಲಕಾರ್ಮಿಕ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಇಲಾಖೆಯು ಪ್ರಕಟಣೆಯಲ್ಲಿ ಎಚ್ಚರಿಸಿದೆ.

Employment of Children Under 18 Prohibited at Firecracker Stalls! | Shivamogga, November 05: The Member Secretary of the District Child Labour Project Society and the Labour Officer have stated that the employment of children under the age of 18 is strictly prohibited in the manufacturing, sale and other processes related to firecrackers, including at the stalls being set up across Shivamogga district and its various taluk centers for the Diwali festival.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *