shimoga job news | ಶಿವಮೊಗ್ಗ : ಉದ್ಯೋಗಾವಕಾಶ – ನವೆಂಬರ್ 13 ರಂದು ನೇರ ಸಂದರ್ಶನ

job news

ಶಿವಮೊಗ್ಗ (shivamogga), ನವೆಂಬರ್ 09: ಶಿವಮೊಗ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ 13-11-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ನೇರ ಸಂದರ್ಶನದಲ್ಲಿ ‘ಸಾಯಿ ಇಂಡಿಯಾ ಪ್ರೈ. ಲಿ.’ ಖಾಸಗಿ ಕಂಪನಿಯು ಭಾಗವಹಿಸುತ್ತಿದೆ. ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶೈಕ್ಷಣಿಕ ಅರ್ಹತೆ: ಐಟಿಐ ಮತ್ತು ಯಾವುದೇ ವಿಷಯದಲ್ಲಿ ಡಿಪ್ಲೊಮಾ ಮಾಡಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.

ಪ್ರವೇಶ ಉಚಿತವಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ರಿಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2 ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606, 9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shivamogga: Job Opportunity – Walk-in Interview on November 13
Shivamogga, November 09: A walk-in interview has been organized at the District Employment Exchange Office in Shivamogga city on November 13, 2026, at 10:00 AM.
The private company ‘Sai India Pvt. Ltd.’ will be participating in this walk-in interview. According to the announcement, candidates for the vacant positions will be selected through this process.
Educational Qualification: Candidates aged between 18 and 35 years who hold an ITI qualification or a Diploma in any discipline are eligible to participate.
Entry is free. Interested candidates may attend the walk-in interview—bringing their resume and a copy of their Aadhaar card—at the District Employment Exchange Office, located at Gutyappa Colony, Pampa Nagar 2nd Cross, Sagara Road, Shivamogga.
For further information, candidates may contact the District Employment Exchange Office in person or via telephone at 9380663606 or 9108235132, the employment officials stated in the announcement.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *