shimoga news | ಶಿವಮೊಗ್ಗ : ದಿನಸಿ ಅಂಗಡಿಯಲ್ಲಿ ಬೆಂಕಿ – ಲಕ್ಷಾಂತರ ರೂ. ನಷ್ಟ!

Shivamogga: Fire at a Grocery Store – Losses Worth Lakhs! | Shivamogga, November 10: A fire broke out at a grocery store in the early hours of November 10—around 2:00 AM—on Kuchalakki Keri Road in Savarkar Nagar, Shivamogga city. The incident occurred at 'Sri Provision Store'. Local residents noticed the fire and alerted the fire department.

ಶಿವಮೊಗ್ಗ (shivamogga), ನವೆಂಬರ್ 10: ದಿನಸಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನವೆಂಬರ್ 10 ರ ಮುಂಜಾನೆ 2 ಗಂಟೆ ಸರಿಸುಮಾರಿಗೆ ಶಿವಮೊಗ್ಗ ನಗರದ ಸಾವರ್ಕರ್ ನಗರದ ಕುಚಲಕ್ಕಿ ಕೇರಿ ರಸ್ತೆಯಲ್ಲಿ ನಡೆದಿದೆ.

ಶ್ರೀ ಪ್ರಾವಿಜನ್ ಸ್ಟೋರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಂಗಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ತಂಡ ಅಂಗಡಿಗೆ ಹೊತ್ತಿದ್ದ ಬೆಂಕಿ ನಂದಿಸುವಲ್ಲಿ ಸಫಲವಾಗಿದೆ. ಹೆಚ್ಚಿನ ಅನಾಹುತ ತಪ್ಪಿಸಿದೆ. ಘಟನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ದಿನಸಿ ಸಾಮಗ್ರಿ, ಪೀಠೋಪಕರಣ ಸೇರಿದಂತೆ ವಿವಿಧ ವಸ್ತುಗಳು ಹಾನಿಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಕಿ ಅವಘಡಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ.

Shivamogga: Fire at a Grocery Store – Losses Worth Lakhs! | Shivamogga, November 10: A fire broke out at a grocery store in the early hours of November 10—around 2:00 AM—on Kuchalakki Keri Road in Savarkar Nagar, Shivamogga city. The incident occurred at ‘Sri Provision Store’. Local residents noticed the fire and alerted the fire department.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *