ಶಿವಮೊಗ್ಗ (shivamogga), ನವೆಂಬರ್ 16: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 19 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ಸಂದರ್ಶನದಲ್ಲಿ ಶೃತಿ ಮೋಟಾರ್ಸ್ ಪ್ರೈ.ಲಿ., ಮತ್ತು ಇಂಡಸ್‌ಇಂಡ್ ಬ್ಯಾಂಕ್ ಪ್ರೈ.ಲಿ. ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.
19-11-2026 ರಂದು ಬೆಳಿಗ್ಗೆ 10:00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದ್ದು
ಎಸ್.ಎಸ್.ಎಲ್.ಸಿ., ಪಿಯುಸಿ, ಡಿಪ್ಲೋಮಾ ಮತ್ತು ಯಾವುದೇ ಪದವಿ ಪಡೆದ 18 ರಿಂದ 35 ವರ್ಷ ಒಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606 / 9108235132 ಗಳಿಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Direct Job Interviews in Shivamogga on November 19 Shivamogga, November 16: The District Employment Exchange will conduct direct job interviews on November 19 at 10:00 AM.

