shimoga news | ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ದ್ವಿಭಾಷಾ ಮಾಧ್ಯಮ ಜಾರಿ : ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ

Minister Madhu Bangarappa

ಶಿವಮೊಗ್ಗ (shivamogga), ನವೆಂಬರ್ 17: ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಖಾಸಗಿ ಶಾಲೆಗಳ ಪೈಪೋಟಿಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಆಂಗ್ಲ (ಇಂಗ್ಲಿಷ್) ಮಾಧ್ಯಮವನ್ನು ಒಳಗೊಂಡ ‘ದ್ವಿಭಾಷಾ ಮಾಧ್ಯಮವನ್ನು (ಬೈಲಿಂಗ್ವಲ್ ಮೀಡಿಯಂ) ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣಕ್ಕಾಗಿ ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳು, ಪ್ರಾದೇಶಿಕ ಅಭಿವೃದ್ಧಿ ಮಂಡಳಿಗಳು, ಕಾರ್ಪೊರೇಟ್ ಸಂಸ್ಥೆಗಳು ಹಾಗೂ ತನ್ನದೇ ಬಜೆಟ್ ಮೂಲಕ ಬೃಹತ್ ಅನುದಾನವನ್ನು ಕ್ರೋಡಿಕರಿಸುತ್ತಿದೆ. ಎಡಿಬಿ 2500 ಕೋಟಿ ರೂ. ನೀಡಲಿದೆ. ಸರ್ಕಾರ ಪ್ರತಿ ಶಾಲೆಗೆ ಸರಾಸರಿ 2 ರಿಂದ 4 ಕೋಟಿ ರೂ. ವೆಚ್ಚ ಮಾಡಲಿದೆ.

ಕರ್ನಾಟಕ ಪಬ್ಲಿಕ್ ಶಾಲೆಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ಈಗಾಗಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದೆ. ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಉದ್ಘಾಟನೆಗೆ ಮುಖ್ಯಮಂತ್ರಿಗಳು ಆಗಮಿಸಲಿಸಬೇಕೆಂಬ ಆಸೆ ಮತ್ತು ವಿಶ್ವಾಸವಿದೆ. ಕೆಪಿಎಸ್ ಶಾಲೆಗಳಲ್ಲಿ ಸುಸಜ್ಜಿತ ಕಟ್ಟಡಗಳು, ಸ್ಮಾರ್ಟ್ ಕ್ಲಾಸ್‌ಗಳು, ವಿಜ್ಞಾನ ಮತ್ತು ಕಂಪ್ಯೂಟರ್ ಪ್ರಯೋಗಾಲಯಗಳು, ಗ್ರಂಥಾಲಯ, ಶುದ್ಧ ಕುಡಿಯುವ ನೀರು ಹಾಗೂ ಉತ್ತಮ ಶೌಚಾಲಯದ ವ್ಯವಸ್ಥೆ ಇರಲಿದೆ.

ಅಲ್ಲದೆ, ಮುಂಬರುವ ಜೂನ್ ಮಾಹೆಯಿಂದ ರಾಜ್ಯದ ಎಲ್ಲಾ 1,600 ಕೆಪಿಎಸ್ ಶಾಲೆಗಳ ಮಕ್ಕಳ ಸಾರಿಗೆ ವ್ಯವಸ್ಥೆಗಾಗಿ ಬಸ್ ಸೌಲಭ್ಯವನ್ನು ಕಲ್ಪಿಸಲಾಗುವುದು. ಇದೇ ವೇಳೆ, ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಸಿಇಟಿ ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ವಿಮಾನ ನಿಲ್ದಾಣ ಅಭಿವೃದ್ಧಿ: ಶಿವಮೊಗ್ಗ ವಿಮಾನ ನಿಲ್ದಾಣದ ನೈಟ್ ಲ್ಯಾಂಡಿಂಗ್ ಕಾಮಗಾರಿಗೆ ರಾಜ್ಯ ಸರ್ಕಾರ ರೂ.23 ಕೋಟಿ ವೆಚ್ಚ ಮಾಡುತ್ತಿದ್ದು, ಈಗಾಗಲೇ ಶೇ. 90ರಷ್ಟು ಕೆಲಸ ಪೂರ್ಣಗೊಂಡಿದೆ. ಉಡಾನ್ ಯೋಜನೆಯಡಿ ಹೆಚ್ಚಿನ ವಿಮಾನಗಳ ಹಾರಾಟಕ್ಕೆ ಹಾಗೂ ಏವಿಯೇಷನ್ ತರಬೇತಿ ಕೇಂದ್ರವನ್ನು ಆರಂಭಿಸುವ ಕುರಿತು ಚಿಂತನೆ ನಡೆಸಲಾಗಿದೆ  ಎಂದು ತಿಳಿಸಿದರು.

ಗೋಷ್ಠಿಯಲ್ಲಿ ರಾಜ್ಯ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್, ಸೂಡಾ ಅಧ್ಯಕ್ಷ ಮಧುಸೂದನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಸಧ್ಯಕ್ಷ ಎಸ್.ಟಿ. ಹಾಲಪ್ಪ, ಮುಖಂಡರಾದ ಯೋಗೀಶ್, ವಸಂತಕುಮಾರ್, ದೇವರಾಜ್, ಕಲಗೋಡು ರತ್ನಾಕರ್, ದೇವಿಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Bilingual Medium to be Implemented in All State Government Schools from the Next Academic Year : Education Minister S. Madhu Bangarappa | Shivamogga, November 17: Education Minister S. Madhu Bangarappa has announced that the state government has taken a significant step to strengthen government schools and effectively compete with private institutions. Preparations are underway to introduce a ‘bilingual medium’—incorporating both Kannada and English—in all government schools across the state, starting from the next academic year.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *