ಭದ್ರಾವತಿ (bhadravathi), ನವೆಂಬರ್ 18: ಕಳೆದ 11 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಗಿರೀಶ್ ನಾಯ್ಕ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಕರ್ನಾಟಕ ಎಕ್ಸೈಸ್ ಆಕ್ಟ್ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ. ಆದರೆ 11 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿರಲಿಲ್ಲ.
ಸದರಿ ಪ್ರಕರಣವನ್ನು ಎಲ್’ಪಿಆರ್ ಎಂದು ಘೋಷಿಸಲಾಗಿತ್ತು. ಈತನ ವಿರುದ್ದ ಎಸಿಜೆ ಮತ್ತು ಜೆಎಂಎಫ್’ಸಿ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿತ್ತು.
ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್’ಪೆಕ್ಟರ್ ಮತ್ತವರ ಸಿಬ್ಬಂದಿಗಳು ಆರೋಪಿಯನ್ನು ಪತ್ತೆ ಹಚ್ಚಿ, ನ್ಯಾಯಾಲಯದ ಮುಂಭಾಗ ಹಾಜರುಪಡಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ಧಾರೆ ಎಂದು ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Bhadravati: Accused arrested after remaining in hiding for 11 years to avoid court hearings! | Bhadravati, November 18: The Bhadravati Rural Police have arrested an accused who had been absconding for the past 11 years, having failed to appear for court hearings. #bhadravati #bhadravathi #news #newsupdate #shimoga #shivamogga

