shimoga job news | ನಿರುದ್ಯೋಗಿಗಳೇ ಗಮನಿಸಿ… ಶಿವಮೊಗ್ಗದಲ್ಲಿ ನವೆಂಬರ್ 26 ರಂದು ಉದ್ಯೋಗ ಮೇಳ : ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗಿ

job news

ಶಿವಮೊಗ್ಗ (shivamogga), ನವೆಂಬರ್ 22: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿವತಿಯಿಂದ ನವೆಂಬರ್ 26 ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಸ್ಥಳ : 26-11-2026 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗದಲ್ಲಿ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ., ಪಿಯುಸಿ, ಡಿಪ್ಲೋಮಾ ಮತ್ತು ಯಾವುದೇ ಪದವಿ ಪಡೆದ 18 ರಿಂದ 35 ವರ್ಷ ಒಳಗಿನ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕು. ಉಚಿತ ಪ್ರವೇಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606 ನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Attention, Job Seekers! Job Fair in Shivamogga on November 26 – Prestigious Private Companies to Participate

Shivamogga, November 22: Employment officials have announced that a job fair is being organized by the District Employment Exchange in Shivamogga on November 26, starting at 10:00 AM.

Prestigious private companies will participate in the job fair. According to the official announcement, candidates for vacant positions will be selected through direct interviews.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *