ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಮತ್ತೆ ಪೊಲೀಸ್ ರೈಡ್..!

ಶಿವಮೊಗ್ಗ, ಮೇ 28: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ (ಸೆಂಟ್ರಲ್ ಜೈಲ್) ದ ಮೇಲೆ ಕಳೆದ ಏಪ್ರಿಲ್ ತಿಂಗಳು ಎಸ್ಪಿ ನೇತೃತ್ವದ ಪೊಲೀಸ್ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿತ್ತು. ಇದೀಗ ಮತ್ತೊಮ್ಮೆ ಸೆಂಟ್ರಲ್ ಜೈಲ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಭಾರೀ ದೊಡ್ಡ ಸಂಖ್ಯೆಯ ಪೊಲೀಸರು, ಭಾನುವಾರ ಬೆಳಿಗ್ಗೆ ಕಾರಾಗೃಹದ ಪ್ರತಿಯೊಂದು ಸೆಲ್ ತಪಾಸಣೆ ನಡೆಸಿದ್ದಾರೆ. ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಕೆ.ಬಿಂಧುಮಣಿ, ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ವಿವಿಧ ಠಾಣೆಗಳ ಇನ್ಸ್’ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ ತಪಾಸಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಶಿವಮೊಗ್ಗ, ಮೇ 28: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ (ಸೆಂಟ್ರಲ್ ಜೈಲ್) ದ ಮೇಲೆ, ಕಳೆದ ಎಪ್ರಿಲ್ ತಿಂಗಳು ಎಸ್ಪಿ ನೇತೃತ್ವದ ಪೊಲೀಸ್ ತಂಡ ದಿಢೀರ್ ದಾಳಿ ಮಾಡಿ ತಪಾಸಣೆ ನಡೆಸಿತ್ತು.

ಇದೀಗ ಮತ್ತೊಮ್ಮೆ ಸೆಂಟ್ರಲ್ ಜೈಲ್ ಮೇಲೆ, ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಭಾರೀ ದೊಡ್ಡ ಸಂಖ್ಯೆಯ ಪೊಲೀಸ್ ತಂಡ, ಭಾನುವಾರ ಬೆಳಿಗ್ಗೆ ಕಾರಾಗೃಹದ ಪ್ರತಿಯೊಂದು ಸೆಲ್ ತಪಾಸಣೆಗೊಳಪಡಿಸಿದೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಕೆ.ಬಿಂಧುಮಣಿ, ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ವಿವಿಧ ಠಾಣೆಗಳ ಇನ್ಸ್’ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿಗಳು ತಪಾಸಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಕಾರಾಗೃಹದ ಮೇಲೆ ದಾಳಿ ನಡೆಸಿದ ವೇಳೆ ಯಾವೆಲ್ಲ ವಸ್ತುಗಳು ಸಿಕ್ಕಿವೆ? ದಿಢೀರ್ ದಾಳಿ ನಡೆಸಲು ಕಾರಣವಾದ ಅಂಶಗಳೇನು? ಎಂಬಿತ್ಯಾದಿ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ. ಈ ಕುರಿತಂತೆ ಪೊಲೀಸ್ ಇಲಾಖೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಆರೋಪಗಳು: ಕೇಂದ್ರ ಕಾರಾಗೃಹದಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಇದರ ಜೊತೆಗೆ ಕಳೆದ ತಿಂಗಳು ಜೈಲ್ ನಲ್ಲಿದ್ದ ವಿಚಾರಣಾಧೀನ ಕೈದಿಯೋರ್ವರು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಅನಾರೋಗ್ಯದ ಕಾರಣದಿಂದ ಇವರು ಮೃತಪಟ್ಟಿದ್ದರು ಎಂದು ಹೇಳಲಾಗಿತ್ತು. ಆದರೆ ವಿಚಾರಣಾಧೀನ ಕೈದಿಯ ಸಾವಿಗೆ, ಜೈಲ್ ನಲ್ಲಿಯೇ ಕೆಲ ಕೈದಿಗಳು ನಡೆಸಿದ್ದ ಹಲ್ಲೆ ಕಾರಣವಾಗಿದೆ ಎಂದು ಮೃತನ ಕುಟುಂಬದವರು ಆರೋಪಿಸಿದ್ದರು.

ಈ ಘಟನೆಯ ಬೆನ್ನಲ್ಲೇ, ಕಾರಾಗೃಹದಲ್ಲಿಯೇ ಮತ್ತೋರ್ವ ವಿಚಾರಣಾಧೀನ ಕೈದಿ ಕಿಟಕಿಯೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ಕೂಡ ನಡೆದಿತ್ತು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *