ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿದಂತೆ ಇಬ್ಬರು ಅರೆಸ್ಟ್..!

ಶಿವಮೊಗ್ಗ, ಮೇ 30: ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣವೊಂದನ್ನು, ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳವು ಆರೋಪದ ಮೇರೆಗೆ ಮನೆಯ ಸೊಸೆ ಹಾಗೂ ಯುವಕನೋರ್ವನನ್ನು ಬಂಧಿಸಿದ್ದಾರೆ! ಹೇಮಾವತಿ ಆರ್ (23) ಹಾಗೂ ಸತೀಶ್ (22) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರಿಂದ 4.30 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 2050 ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

*ಸಿನಿಮೀಯ ಶೈಲಿಯ ಕಳವು ಪ್ರಕರಣ ಬಯಲಿಗೆಳೆದ ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು

ಶಿವಮೊಗ್ಗ, ಮೇ 30: ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣವೊಂದನ್ನು, ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳವು ಆರೋಪದ ಮೇರೆಗೆ ಮನೆಯ ಸೊಸೆ ಹಾಗೂ ಯುವಕನೋರ್ವನನ್ನು ಬಂಧಿಸಿದ್ದಾರೆ!

ಹೇಮಾವತಿ ಆರ್ (23) ಹಾಗೂ ಸತೀಶ್ (22) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರಿಂದ 4.30 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 2050 ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಮಂಜುನಾಥ್ ಬಿ ರವರ ನೇತೃತ್ವದಲ್ಲಿ ಸಬ್ ಇನ್‌ಸ್ಪೆಕ್ಟರ್ ಗಳಾದ ರಾಜುರೆಡ್ಡಿ ಬೆನ್ನೂರು, ಕುಮಾರ್ ಕುರಗುಂದ,

ಎಎಸ್ಐ ಮನೋಹರ್, ಹೆಡ್ ಕಾನ್ಸ್​ಟೇಬಲ್ ಗಳಾದ ಕಿರಣ್ ಮೋರೆ, ಅರುಣ್ ಕುಮಾರ್, ಮೋಹನ್ ಕುಮಾರ್, ಕಾನ್ಸ್​ಟೇಬಲ್ ಗಳಾದ ನಾಗಪ್ಪ, ಹರೀಶ್ ನಾಯ್ಕ್, ಲಂಕೇಶ್, ಕಾಂತರಾಜ್, ಅರಿಹಂತ್, ಹರೀಶ್, ಸಂತೋಷ್, ರಮೇಶ್, ಶಿವಕುಮಾರ್, ರಾಘವೇಂದ್ರ, ಜಯಪ್ಪರವರು  ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ಹಿನ್ನಲೆ: 13-5-2023 ರಂದು ಗ್ರಾಮವೊಂದರ ಮಹಿಳೆಯೋರ್ವರು ತುಂಗಾನಗರ ಪೊಲೀಸ್ ಠಾಣೆಗೆ ದೂರು ನೀಡಿ, ಮನೆಯ ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ನಗದನ್ನು ಕಳ್ಳರು ಅಪಹರಿಸಿದ್ದಾರೆ. ಹುಡುಕಿಕೊಡುವಂತೆ ಕೋರಿಕೊಂಡಿದ್ದರು.

ನಿಗೂಢವಾಗಿದ್ದ ಪ್ರಕರಣದ ತನಿಖೆಗೆ, ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ತನಿಖೆ ವೇಳೆ ವೃತ್ತಿಪರ ಚೋರರ ಕೃತ್ಯವಲ್ಲ, ಪರಿಚಯಸ್ಥರೇ ಭಾಗಿಯಾಗಿರುವ ಕೃತ್ಯವೆಂಬುವುದು ಪೊಲೀಸರಿಗೆ ಮನವರಿಕೆಯಾಗಿದೆ.

ತನಿಖೆ ವೇಳೆ ಸದರಿ ಮನೆಯ ಸೊಸೆಯೇ, ಆಕೆಗೆ ಪರಿಚಯವಿದ್ದ ಅದೇ ಗ್ರಾಮದ ಯುವಕನ ಜೊತೆ ಸೇರಿ ಚಿನ್ನಾಭರಣ ಕಳವು ಮಾಡಿದ್ದು ಪೊಲೀಸರಿಗೆ ಗೊತ್ತಾಗಿದೆ. ತದನಂತರ ಇಬ್ಬರನ್ನು ಬಂಧಿಸಿ, ಅವರು ಕಳವು ಮಾಡಿದ್ದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *