ಭದ್ರಾವತಿ ನಗರದಲ್ಲಿ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಆಗ್ರಹಿಸಿ ಮನವಿ

ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ. ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ.

ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಆದರೆ ಭದ್ರಾವತಿ ನಗರದಲ್ಲಿ ವ್ಯವಸ್ಥಿತ ಈಜುಕೊಳವಿಲ್ಲವಾಗಿದೆ. ಇದರಿಂದ ಈಜುವ ಆಸಕ್ತಿ ಹೊಂದಿದವರಿಗೆ ಸಾಕಷ್ಟು ಎಡರುತೊಡರಾಗುವಂತಾಗಿದೆ. ಅದರಲ್ಲಿಯೂ ಈಜು ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತಿ ಹೊಂದಿರುವ ಯುವಕ – ಯುವತಿಯರು ತೊಂದರೆ ಪಡುವಂತಾಗಿದೆ ಎಂದು ಟ್ರಸ್ಟ್ ತಿಳಿಸಿದೆ.

ಈಜು ಪಟುಗಳು, ಉತ್ಸಾಹಿ ಈಜುಗಾರರಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಭದ್ರಾವತಿ ಪಟ್ಟಣದಲ್ಲಿ ಸುಸಜ್ಜಿತವಾದ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಆಡಳಿತ ಕ್ರಮಕೈಗೊಳ್ಳಬೇಕು. ಈ ಮೂಲಕ ನಾಗರೀಕರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಟ್ರಸ್ಟ್ ಆಡಳಿತಕ್ಕೆ ಮನವಿ ಮಾಡಿದೆ.

ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ.
ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಮನವಿ ಅರ್ಪಿಸುವ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ಬಿ.ಎಂ.ಶಾಂತಕುಮಾರ್ ಸೇರಿದಂತೆ ಟ್ರಸ್ಟ್ ನ ಪದಾಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →