ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಮಾಹಿತಿ ನೀಡಲು ಎಸ್ಪಿ ಮನವಿ

ಆಗುಂಬೆ (ತೀರ್ಥಹಳ್ಳಿ), ಜೂ. 4: ‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಪೊಲೀಸ್ ಠಾಣೆ ಅಥವಾ ಬೀಟ್ ಸಿಬ್ಬಂದಿಗೆ ಮಾಹಿತಿ ನೀಡುವಂತೆ’ ನಾಗರೀಕರಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮನವಿ ಮಾಡಿದ್ದಾರೆ. ಭಾನುವಾರ ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಕೈಮರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾಗರೀಕರು ನೀಡುವ ಮಾಹಿತಿಯಿಂದ, ಅಕ್ರಮ ಮದ್ಯ ಮಾರಾಟಗಾರರ ವಿರುದ್ದ ಕ್ರಮ ಜರುಗಿಸಲು ಹಾಗೂ ಮದ್ಯ ಮಾರಾಟ ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಆಗುಂಬೆ (ತೀರ್ಥಹಳ್ಳಿ), ಜೂ. 4: ‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಪೊಲೀಸ್ ಠಾಣೆ ಅಥವಾ ಬೀಟ್ ಸಿಬ್ಬಂದಿಗೆ ಮಾಹಿತಿ ನೀಡುವಂತೆ’ ನಾಗರೀಕರಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮನವಿ ಮಾಡಿದ್ದಾರೆ.

ಭಾನುವಾರ ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಕೈಮರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾಗರೀಕರು ನೀಡುವ ಮಾಹಿತಿಯಿಂದ, ಅಕ್ರಮ ಮದ್ಯ ಮಾರಾಟಗಾರರ ವಿರುದ್ದ ಕ್ರಮ ಜರುಗಿಸಲು ಹಾಗೂ ಮದ್ಯ ಮಾರಾಟ ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಗ್ರಾಮದ ಎಲ್ಲ ವರ್ಗದವರನ್ನೊಳಗೊಂಡ 50 ಜನರ ಬೀಟ್ ಸಮಿತಿ ರಚಿಸಲಾಗುವುದು. ನಿಯಮಿತವಾಗಿ ಈ ಸಮಿತಿಯ ಸಭೆ ನಡೆಯಲಿದೆ. ಗ್ರಾಮಸ್ಥರ ಕುಂದುಕೊರತೆ ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು.

ಜೊತೆಗೆ ಗ್ರಾಮಗಳಲ್ಲಿ ಆಯ್ದ ಯುವಕರನ್ನೊಳಗೊಂಡ ಯುವ ಪಡೆ ರಚಿಸಲಾಗುವುದು. ಈ ಪಡೆಯು ಬೀಟ್ ಸಿಬ್ಬಂದಿಗಳೊಂದಿಗೆ ಗಸ್ತು ಕಾರ್ಯದಲ್ಲಿ ಭಾಗಿಯಾಗಲಿದೆ. ಜೊತೆಗೆ ಅಕ್ರಮ ಚಟುವಟಿಕೆಗಳ ಬಗ್ಗೆ ನಾಗರೀಕರಿಗೆ ಮಾಹಿತಿ ನೀಡಲಿದೆ ಎಂದು ತಿಳಿಸಿದರು.

ಅಗತ್ಯ ಮತ್ತು ತುರ್ತು ಸಂದರ್ಭದಲ್ಲಿ ಇಆರ್’ಎಸ್ಎಸ್-112 ಸಹಾಯವಾಣಿಗೆ ಕರೆ ಮಾಡಿ ಪೊಲೀಸ್ ಸಹಾಯ ಪಡೆದುಕೊಳ್ಳಬಹುದಾಗಿದೆ ಎಂದರು.

ಕೈಮರದ ರಸ್ತೆಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎನ್.ಹೆಚ್.ಎ.ಐ ಜೊತೆ ಸಮಾಲೋಚಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಎಸ್ಪಿ ಅವರು ಗ್ರಾಮಸ್ಥರಿಗೆ ತಿಳಿಸಿದ್ದಾರೆ.

ಸಭೆಯಲ್ಲಿ ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತರ, ಇನ್ಸ್’ಪೆಕ್ಟರ್ ಪ್ರವೀಣ್ ನೀಲಮ್ಮನವರ್, ಸಬ್ ಇನ್ಸ್’ಪೆಕ್ಟರ್ ಶಿವಕುಮಾರ್ ಸೇರಿದಂತೆ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *