‘ಖಾಸಗಿ ಬಸ್’ಗಳಲ್ಲಿ ಜೋರಾಗಿ ಹಾಡು ಹಾಕಿದ್ರೆ… ಮಿತಿಮೀರಿದ ವೇಗದಲ್ಲಿ ಬಸ್ ಓಡಿಸಿದ್ರೆ ಬೀಳುತ್ತೆ ಕೇಸ್..!’

ಮಿತಿಮೀರಿದ ವೇಗದಲ್ಲಿ ಬಸ್ ಓಡಿಸಿದ್ರೆ ಬೀಳುತ್ತೆ ಕೇಸ್..!’

ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಎಚ್ಚರಿಕೆ

ಸೊರಬ, ಜೂ. 13: ‘ಖಾಸಗಿ ಬಸ್ ಗಳಲ್ಲಿ ಪ್ರಯಾಣದ ವೇಳೆ ಹೆಚ್ಚಿನ ಶಬ್ದ ಹೊರಹೊಮ್ಮುವ ಸ್ಪೀಕರ್ ಗಳಲ್ಲಿ ಹಾಡು ಹಾಕಿದರೆ ಹಾಗೂ ಮಿತಿಮೀರಿದ ವೇಗದಲ್ಲಿ ಬಸ್ ಓಡಿಸಿದರೆ ಕ್ರಮಕೈಗೊಳ್ಳಲಾಗುವುದು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸೊರಬ ತಾಲೂಕು ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಸಮನಹಳ್ಳಿ ಹಾಗೂ ಎಣ್ಣೆಕೊಪ್ಪ ಗ್ರಾಮಗಳಲ್ಲಿ ಜೂ. 12 ರಂದು ನಡೆದ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ನಂತರ ಅವರು ಮಾತನಾಡಿದರು.

ಮಿತಿಮೀರಿದ ವೇಗದಲ್ಲಿ ಚಾಲನೆ ಹಾಗೂ ಹೆಚ್ಚಿನ ಶಬ್ದ ಹೊರಹೊಮ್ಮುವ ಹಾಡುಗಳನ್ನು ಹಾಕಿಕೊಂಡು ಬಸ್ ಚಾಲನೆ ಮಾಡುತ್ತಿರುವುದರಿಂದ, ಅಪಘಾತಗಳು ಹೆಚ್ಚಾಗುತ್ತಿವೆ ಎಂಬ ದೂರುಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿವೆ. ಈ ಕುರಿತಂತೆ ನಿಯಮಿತವಾಗಿ ತಪಾಸಣೆ ನಡೆಸಲಾಗುವುದು. ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಸಮಿತಿಗಳ ರಚನೆ: ಪ್ರತಿಯೊಂದು ಗ್ರಾಮದಲ್ಲಿ ಬೀಟ್ ಸಮಿತಿ ರಚನೆ ಮಾಡಲಾಗುವುದು. ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಸಮಿತಿಗಳ ಸಭೆ ನಡೆಸಲಿದ್ದಾರೆ. ಜೊತೆಗೆ ಪ್ರತಿ ಗ್ರಾಮದಲ್ಲಿ ಯುವಕರನ್ನೊಳಗೊಂಡ ಯುವ ಪಡೆ ರಚಿಸಲಾಗುವುದು. ಯುವ ಪಡೆ ಸದಸ್ಯರು ಬೀಟ್ ಪೊಲೀಸರೊಂದಿಗೆ ಗಸ್ತು ನಡೆಸಲಿದ್ದಾರೆ. ಜೊತೆಗೆ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದರು.

ದ್ವಿ ಚಕ್ರ ವಾಹನ ಸವಾರರು ಕೇವಲ ದಂಡ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮಾತ್ರ ಹೆಲ್ಮೆಟ್ ಧರಿಸದೆ, ತಮ್ಮ ರಕ್ಷಣೆಯ ದೃಷ್ಠಿಯಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳನ್ನು ಸಮಪರ್ಕವಾಗಿ ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.

ಬಾಲ್ಯ ವಿವಾಹ ಕಾನೂನು ರೀತ್ಯ ಅಪರಾಧವಾಗಿದೆ. ಬಾಲ್ಯ ವಿವಾಹ ನಡೆಸಿದವರ ವಿರುದ್ದ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಯಾವುದೇ ಅಗತ್ಯ ಮತ್ತು ತುರ್ತು ಸಂದರ್ಭದಲ್ಲಿ ERSS – 112  ಸಹಾಯವಾಣಿಗೆ ಕರೆ ಮಾಡಿದರೆ, ತತ್’ಕ್ಷಣವೇ ಪೊಲೀಸ್ ನೆರವು ದೊರಕಲಿದೆ ಎಂದು ಇದೇ ವೇಳೆ ಮಿಥುನ್ ಕುಮಾರ್ ತಿಳಿಸಿದ್ದಾರೆ. 

ಸಭೆಯಲ್ಲಿ ಡಿವೈಎಸ್ಪಿ ಶಿವಾನಂದ ಮದರಕಂಡಿ, ಸರ್ಕಲ್ ಇನ್ಸ್ಪೆಕ್ಟರ್ ರಾಜಶೇಖರ್, ಸಬ್ ಇನ್ಸ್’ಪೆಕ್ಟರ್ ಗಳಾದ ರಾಜು ರೆಡ್ಡಿ, ಅಗಾಸೆ ಮೊದಲಾದವರಿದ್ದರು.

ಸೂಕ್ತ ದಾಖಲೆಗಳಿಲ್ಲದೆ ವಾಹನ ಚಲಾಯಿಸದಂತೆ ಸೂಚನೆ

*** ಸರಕು ಸಾಗಾಣಿಕೆ ಮತ್ತು ಇತರೆ ಎಲ್ಲ ತರಹದ ವಾಹನಗಳ ಸವಾರರು ಕಡ್ಡಾಯವಾಗಿ ಚಾಲನಾ ಪರವಾನಿಗೆ, ವಾಹನದ ವಿಮೆ ಸೇರಿದಂತೆ ಸೂಕ್ತ ದಾಖಲಾತಿ ಇಟ್ಟುಕೊಳ್ಳಬೇಕು. ನಿಯಮಾನುಸಾರ ದಾಖಲೆಗಳಿಲ್ಲದೆ  ವಾಹನ ಚಲಾಯಿಸುವುದು ಕಾನೂನು ರೀತ್ಯ ಅಪರಾಧವಾಗಿದೆ. ಇಂತಹವರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಮಿಥುನ್ ಕುಮಾರ್ ಜಿ.ಕೆ. ಅವರು ಎಚ್ಚರಿಕೆ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *