ಪ್ರಧಾನಮಂತ್ರಿ ವಿಮಾನ ಲ್ಯಾಂಡಿಂಗ್ ಮಾಡಿಸುವ ಮೂಲಕ ಉದ್ಘಾಟನೆ!

ಶಿವಮೊಗ್ಗ, ಜ.‌ 18: ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಮಾನ ಲ್ಯಾಂಡಿಂಗ್ ಮಾಡಿಸುವ ಮೂಲಕ ಉದ್ಘಾಟಿಸುವ ಚಿಂತನೆ ನಡೆಸಲಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಬುಧವಾರ ವಿಮಾನ ನಿಲ್ದಾಣ ಆವರಣದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈಗಾಗಲೇ ಸ್ಟಾರ್ ಏರ್ ಲೈನ್ಸ್ ಸಂಸ್ಥೆ ಶಿವಮೊಗ್ಗದಿಂದ ವಿಮಾನಗಳ ಕಾರ್ಯಾಚರಣೆಗೆ ನಿರ್ಧರಿಸಿದೆ. ಉಳಿದ ವಿಮಾನಯಾನ ಸಂಸ್ಥೆಗಳ ಜೊತೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದರು.

ಪ್ರಥಮ ಹಂತದಲ್ಲಿ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸಂಪರ್ಕ ಲಭ್ಯವಾಗಲಿದೆ. ತದನಂತರ ಉಳಿದ ನಗರಗಳಿಗೆ ವಿಮಾನ ಸಂಚಾರ ಆರಂಭವಾಗಲಿದೆ ಎಂದು ಸಂಸದರು ಮಾಹಿತಿ ತಿಳಿಸಿದ್ದಾರೆ.

ಈಗಾಗಲೇ ವಿಮಾನ ನಿಲ್ದಾಣ ಸಿಬ್ಬಂದಿಗಳಿಗೆ ತರಬೇತಿ ಕಾರ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಏರ್’ಪೋರ್ಟ್ ಆಧಾರಿಟಿ ಆಫ್ ಇಂಡಿಯಾದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಅಂತಿಮ ಹಂತದ ಅನುಮತಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *