ರೈಲ್ವೆ ಅಂಡರ್ ಪಾಸ್ ಕಾಮಗಾರಿ ಪೂರ್ಣವಾಗೋದು ಯಾವಾಗ?!

ರೈಲ್ವೆ ಅಂಡರ್ ಪಾಸ್ ಕಾಮಗಾರಿ ಪೂರ್ಣವಾಗೋದು ಯಾವಾಗ?! ಉದಯ ಸಾಕ್ಷಿ

ಆರಂಭದಲ್ಲಿ ಸಮರೋಪಾದಿ ನಂತರ  ಆಮೆ ವೇಗ..!!

ಶಿವಮೊಗ್ಗ, ಜೂ. 23: ಶಿವಮೊಗ್ಗ ನಗರದ ವೀರಣ್ಣನ ಲೇ ಔಟ್  ಬಳಿ ನಡೆಸಲಾಗುತ್ತಿರುವ ರೈಲ್ವೆ ಅಂಡರ್ ಪಾಸ್ ಕಾಮಗಾರಿ ಆಮೆ ವೇಗದಲ್ಲಿ ಸಾಗುತ್ತಿದೆ. ವರ್ಷಗಳೇ ಉರುಳಿದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.

ಕಾಮಗಾರಿಗೆ ಚಾಲನೆ ನೀಡಿದ್ದ ಸಂದರ್ಭದಲ್ಲಿ ಏಳೆಂಟು ತಿಂಗಳಲ್ಲಿ ಅಂಡರ್ ಪಾಸ್ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಲಾಗಿತ್ತು. ಪ್ರಾರಂಭದಲ್ಲಿ ಸಮರೋಪಾದಿಯಲ್ಲಿ ಕಾಮಗಾರಿ ನಡೆಯುತ್ತಿತ್ತು.

ರೈಲ್ವೆ ಹಳಿ ಕೆಳಭಾಗದಲ್ಲಿ ಮಾರ್ಗ ನಿರ್ಮಾಣವೂ ಪೂರ್ಣಗೊಂಡಿತ್ತು. ಮತ್ತೊಂದು ಬದಿಯಲ್ಲಿ ತಡೆಗೋಡೆ, ರಸ್ತೆ ನಿರ್ಮಾಣ ಕಾರ್ಯ ಕೂಡ ನಡೆಸಲಾಗಿತ್ತು. ಆದರೆ ವೀರಣ್ಣನ ಲೇಔಟ್ ಬದಿಯಲ್ಲಿ ಮಾರ್ಗ ನಿರ್ಮಾಣ, ತಡೆಗೋಡೆ ನಿರ್ಮಾಣ ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ ಎಂದು ನಿವಾಸಿಗಳು ದೂರಿದ್ದಾರೆ.

ರೈಲ್ವೆ ಅಂಡರ್ ಪಾಸ್ ಕಾಮಗಾರಿ ಪೂರ್ಣವಾಗೋದು ಯಾವಾಗ?!

ಸ್ಥಳದಲ್ಲಿ ಬಂಡೆ ಕಲ್ಲುಗಳು ಸಿಕ್ಕಿರುವುದರಿಂದ ಕಾಮಗಾರಿಗೆ ಅಡೆತಡೆ ಎದುರಾಗಿದೆ. ಈ ಕಾರಣದಿಂದ ಕಳೆದ ಹಲವು ತಿಂಗಳುಗಳಿಂದ ವಿಳಂಬಗತಿಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಇನ್ನಾದರೂ ರೈಲ್ವೆ ಇಲಾಖೆ ಅಂಡರ್ ಪಾಸ್ ಕಾಮಗಾರಿ ಬಿರುಸುಗೊಳಿಸಬೇಕು. ಕಾಲಮಿತಿಯೊಳಗೆ ಕೆಲಸ ಪೂರ್ಣಗೊಳಿಸಬೇಕು. ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸುತ್ತಾರೆ.

ಕಾಮಗಾರಿಗೆ ಚಾಲನೆ ನೀಡಿದ್ದ ಸಂಸದರು

ಸೂರ್ಯ ಲೇಔಟ್, ಪಿ ಅಂಡ್ ಟಿ ಕಾಲೋನಿ, ಅರವಿಂದ ನಗರ, ಕನಕ ನಗರ, ಸುತ್ತಮುತ್ತಲಿನ ಬಡಾವಣೆಗಳ ನಿವಾಸಿಗಳು ಮಾನವ ರಹಿತ ರೈಲ್ವೆ ಲೆವೆಲ್ ಕ್ರಾಸಿಂಗ್ ಮೂಲಕ ಸಂಚರಿಸುತ್ತಿದ್ದರು. ರೈಲ್ವೆ ಹಳಿ ಬಳಿ ಅಪಘಾತಗಳು ಸಂಭವಿಸಿದ್ದವು.

ರೈಲ್ವೆ ಅಂಡರ್ ಪಾಸ್ ಕಾಮಗಾರಿ ಪೂರ್ಣವಾಗೋದು ಯಾವಾಗ?!

ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯು ಸದರಿ ರಸ್ತೆ ಬಂದ್ ಮಾಡಿತ್ತು. ರೈಲ್ವೆ ಹಳಿಯ ಇಕ್ಕೆಲಗಳಲ್ಲಿ ತಡೆಗೋಡೆ ಹಾಕಿತ್ತು. ಇದರಿಂದ ಸ್ಥಳೀಯ ನಿವಾಸಿಗಳು ಸದರಿ ಸ್ಥಳದಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದರು. ಈ ಸಂಬಂಧ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಮಾಡಿಕೊಂಡಿದ್ದರು. ನಾಗರೀಕರ ಮನವಿಗೆ ಸ್ಪಂದಿಸಿದ ಸಂಸದರು, ಅಂಡರ್ ಪಾಸ್ ಕಾಮಗಾರಿ ಮಂಜೂರು ಮಾಡಿಸಿದ್ದರು. ಕಾಮಗಾರಿಗೂ ಕೂಡ ಚಾಲನೆ ನೀಡಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *