ಭದ್ರಾವತಿ – ಶಿವಮೊಗ್ಗದಲ್ಲಿ ಬೈಕ್ ಕಳವು : ಓರ್ವನ ಬಂಧನ

ಭದ್ರಾವತಿ – ಶಿವಮೊಗ್ಗದಲ್ಲಿ ಬೈಕ್ ಕಳವು : ಓರ್ವನ ಬಂಧನ

 ಭದ್ರಾವತಿ / ಶಿವಮೊಗ್ಗ, ಜೂ. 25: ಬೈಕ್ ಕಳವು ಮಾಡಿದ್ದ ಆರೋಪದ ಮೇರೆಗೆ, ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ನಡೆದಿದೆ. ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದ ಪ್ರಭು ಯಾನೆ ಕೋಳಿ (28) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 80 ಸಾವಿರ ರೂ. ಮೌಲ್ಯದ ಎರಡು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.

15-6-2023 ರಂದು ಭದ್ರಾವತಿ ಪಟ್ಟಣದ ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟಿವಿಎಸ್ ವಿಕ್ಟರ್ ಬೈಕ್ ವೊಂದನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಬೈಕ್ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದ ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿ ಪ್ರಭುವನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಯು ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದೊಂದು ಬೈಕ್ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದು ಬೆಳಕಿಗೆ ಬಂದಿತ್ತು.

ಭದ್ರಾವತಿ ಉಪ ವಿಭಾಗದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ ದಯಾಮ, ಸರ್ಕಲ್ ಇನ್ಸ್’ಪೆಕ್ಟರ್ ರಾಘವೇಂದ್ರ ಕಾಂಡಿಕೆ  ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಶರಣಪ್ಪ ಹಂಡ್ರುಗಲ್ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *