ಡಿ. 29 ರಂದು ಶಿವಮೊಗ್ಗ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ, ಡಿ. 28: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ನಗರ ವ್ಯಾಪ್ತಿಯ ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್.ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಜ್ಯೋತಿನಗರ, ವಿದ್ಯಾನಗರ, ಕಂಟ್ರಿಕ್ಲಬ್ ರಸ್ತೆ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲಿ ್ಲ ದಿ: 29/12/20222 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →