ಶಿವಮೊಗ್ಗ : ಆಗಸ್ಟ್ 31 ರಿಂದ ವಿಮಾನ ಹಾರಾಟ ಆರಂಭ

ಶಿವಮೊಗ್ಗ : ಆಗಸ್ಟ್ 31 ರಿಂದ ವಿಮಾನ ಹಾರಾಟ ಆರಂಭ ಉಡಾನ್ ಯೋಜನೆಯಡಿ ತಿರುಪತಿ ಗೋವಾ ಹೈದರಾಬಾದ್ ಗೂ ವಿಮಾನ : ಸಚಿವ ಎಂ.ಬಿ.ಪಾಟೀಲ್

ಉಡಾನ್ ಯೋಜನೆಯಡಿ ತಿರುಪತಿ, ಗೋವಾ, ಹೈದರಾಬಾದ್ ಗೂ ವಿಮಾನ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಜು. 27: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ‌ ಕಾರ್ಯಾಚರಣೆ ಆರಂಭಿಸಲಿದ್ದು ಅಂದು‌ ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ.

ಈ ಮುಂಚೆ ಆಗಸ್ಟ್ 11ರಿಂದ ಆರಂಭವಾಗಬೇಕಿತ್ತು. ತಾಂತ್ರಿಕ ಕಾರಣಗಳಿಂದ 31ಕ್ಕೆ ಹೋಗಿದ್ದು ಇಂಡಿಗೊ‌ ಏರ್ ಲೈನ್ಸ್ ತನ್ನ ಬುಕ್ಕಿಂಗ್ ಅನ್ನು ಆರಂಭಿಸಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ತಿರುಪತಿಗೂ ಸಂಪರ್ಕ: ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್ ನಗರಗಳಿಗೆ ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ನೀಡಲು ಮೂರು ಏರ್ ಲೈನ್ಸ್ ಸಂಸ್ಥೆಗಳಿಗೆ ಅನುಮತಿ ಸಿಕ್ಕಿದೆ ಎಂದೂ ಸಚಿವರು ತಿಳಿಸಿದ್ದಾರೆ.

ಸ್ಪೈಸ್ ಜೆಟ್, ಸ್ಟಾರ್ ಏರ್ ಲೈನ್ಸ್ ಮತ್ತು ಅಲಯನ್ಸ್ ಏರ್ ಸಂಸ್ಥೆಗಳು ಈ ರಹದಾರಿಗಳಲ್ಲಿ ವಿಮಾನ ಸಂಚಾರ ಮಾಡುವ ಸಂಬಂಧ ಕರೆದಿದ್ದ ಟೆಂಡರ್ ನಲ್ಲಿ ಭಾಗವಹಿಸಿ ಯಶಸ್ವಿಯಾಗಿವೆ.

ಸದ್ಯಕ್ಕೆ ಹಗಲು ವೇಳೆಯ ವಿಮಾನ ಸಂಚಾರ ಮಾತ್ರ ಇರುತ್ತದೆ. ರಾತ್ರಿ ವೇಳೆ ಲ್ಯಾಂಡಿಂಗ್ ವ್ಯವಸ್ಥೆಗೆ ಸಂಬಂಧಿಸಿದ ಕಾಮಗಾರಿ ಪ್ರಗತಿಯಲ್ಲಿದ್ದು ಆದಷ್ಟು ಬೇಗ ಮುಗಿಯಲಿದೆ ಎಂದು ಅವರು ವಿವರಿಸಿದ್ದಾರೆ.

ಉಡಾನ್ ಯೋಜನೆಯಡಿ ಅನುಮತಿ ಪಡೆದಿರುವ ವಿಮಾನಯಾನ ಸಂಸ್ಥೆಗಳೂ ವಿಮಾನ ಸಂಚಾರಕ್ಕೆ ಸಿದ್ಧತೆ ನಡೆಸಿದ್ದು, ನಾಗರಿಕ ವಿಮಾನಯಾನ ನಿರ್ದೇಶನಾಲಯದ ಅನುಮತಿ ಸಿಕ್ಕ ನಂತರ ಅವೂ ಕಾರ್ಯಾಚರಣೆ ನಡೆಸಲಿವೆ ಎಂದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →