ತಾಳಗುಪ್ಪ – ಹುಬ್ಬಳ್ಳಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಸಂಸದರ ಮನವಿ

ಶಿವಮೊಗ್ಗ, ಆ. 3: ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ದೆಹಲಿಯಲ್ಲಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ರೈಲ್ವೆ ಯೋಜನೆಗಳು ಹಾಗೂ ಬಿಎಸ್ಎನ್ಎಲ್ ಮೊಬೈಲ್ ಪೋನ್ ಟವರ್ ಗಳ ಅಳವಡಿಕೆ ಕುರಿತಂತೆ ಚರ್ಚಿಸಿದರು.

ತಾಳಗುಪ್ಪ - ಹುಬ್ಬಳ್ಳಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಸಂಸದರ ಮನವಿ

ರೈಲ್ವೆ ಯೋಜನೆಗಳು :  ತಾಳಗುಪ್ಪ – ಸಿದ್ದಾಪುರ – ಶಿರಸಿ – ಮುಂಡಗೋಡ – ಹುಬ್ಬಳ್ಳಿ ನಡುವಿನ 158 ಕಿ.ಮೀ. ಉದ್ದದ ರೈಲು ಮಾರ್ಗ ಯೋಜನೆಗೆ ಸಂಬಂಧಿಸಿದಂತೆ, ಈಗಾಗಲೇ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದೆ. ಆದರೆ ಇಲ್ಲಿಯವರೆಗೂ ಮಾರ್ಗ ನಿರ್ಮಾಣಕ್ಕೆ ಅನುಮತಿ ದೊರಕಿಲ್ಲ. ಈ ಯೋಜನೆಯ ಬಗ್ಗೆ ಸಂಸದರು ಪ್ರಸ್ತಾಪಿಸಿದ್ದಾರೆ. ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡುವುದರ ಜೊತೆಗೆ, ಕಾಲಮಿತಿಯೊಳಗೆ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗ ನಿರ್ಮಾಣ, ಶಿವಮೊಗ್ಗ ಹಾಗೂ ಭದ್ರಾವತಿಯ ವಿವಿಧೆಡೆ ನಿರ್ಮಿಸಲಾಗುತ್ತಿರುವ ನಾಲ್ಕು ರೈಲ್ವೆ ಮೇಲ್ಸೇತುವೆ ಮತ್ತು ಕೋಟೆಗಂಗೂರಿನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಕೋಚಿಂಗ್ ಡಿಪೋ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು. ನಿಗದಿತ ಅವದಿಗಿಂತ ಮುಂಚಿತವಾಗಿ ಪೂರ್ಣಗೊಳಿಸಬೇಕು‌. ಜೊತೆಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಸಚಿವರಿಗೆ ಕೋರಿದ್ದಾರೆ.

ಶಿವಮೊಗ್ಗ – ಬೆಂಗಳೂರು ನಡುವೆ ಸಂಚರಿಸುವ ರೈಲುಗಳ ವೇಗ ಹೆಚ್ಚಳ ಮತ್ತು ಸಮಯ ಬದಲಾವಣೆ ಕುರಿತಂತೆ ಚರ್ಚಿಸಿದ್ದಾರೆ. ಕುಂಸಿ, ಹಾರನಹಳ್ಳಿ, ಅರಸಾಳು ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು, ಶಿರೂರು, ಬಿಜೂರು ಹಾಗೂ ಸೇನಾಪುರ ರೈಲ್ವೇ ನಿಲ್ದಾಣಗಳಲ್ಲಿ ಸ್ಥಳೀಯ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಹೆಚ್ಚಿನ ರೈಲುಗಳು ನಿಲುಗಡೆಗೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

ತಾಳಗುಪ್ಪ - ಹುಬ್ಬಳ್ಳಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಸಂಸದರ ಮನವಿ

ಮೊಬೈಲ್ ಟವರ್ :  ಶಿವಮೊಗ್ಗ ಜಿಲ್ಲೆಗೆ ಮಂಜೂರು ಮಾಡಲಾಗಿರುವ ಬಿಎಸ್ಎನ್ಎಲ್ ಮೊಬೈಲ್ ಪೋನ್ ಟವರ್ ಗಳ ಅನುಷ್ಠಾನದ ಬಗ್ಗೆ ಸಚಿವರೊಂದಿಗೆ ಸಂಸದರು ಚರ್ಚಿಸಿದ್ದಾರೆ.

ಮಂಜೂರು ಮಾಡಲಾಗಿರುವ ಕೆಲವು ಸ್ಥಳಗಳಲ್ಲಿ ಬೇರೆ ನೆಟ್ ವರ್ಕ್ ಸಿಗ್ನಲ್ ಗಳು ಸಿಗುತ್ತಿರುವ ಮಾಹಿತಿಯಿದೆ. ಈ ಕಾರಣದಿಂದ ಬೇರೆ ಸ್ಥಳಗಳಲ್ಲಿ ಟವರ್ ಸ್ಥಾಪನೆಗೆ ಅನುಮತಿ ನೀಡುವಂತೆ ಸಚಿವರಲ್ಲಿ ಸಂಸದರು ಇದೇ ವೇಳೆ ಮನವಿ ಮಾಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →