ತೀರ್ಥಹಳ್ಳಿ – ರೆಸಾರ್ಟ್ ಮೇಲೆ ಪೊಲೀಸರ ದಾಳಿ : ಬಂದೂಕು, ಚಾಕು, ಕತ್ತಿ, ಮದ್ಯದ ಬಾಟಲಿಗಳು ವಶ..!

ತೀರ್ಥಹಳ್ಳಿ - ರೆಸಾರ್ಟ್ ಮೇಲೆ ಪೊಲೀಸರ ದಾಳಿ : ಬಂದೂಕು, ಚಾಕು, ಕತ್ತಿ, ಮದ್ಯದ ಬಾಟಲಿಗಳು ವಶ..!

ತೀರ್ಥಹಳ್ಳಿ, ಆ. 13: ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಆರೋಪದ ಮೇರೆಗೆ, ರೆಸಾರ್ಟ್ ವೊಂದರ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ ಘಟನೆ ತೀರ್ಥಹಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ‘ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1 ಲಕ್ಷ ರೂ. ಮೌಲ್ಯದ ಡಬ್ಬಲ್ ಬ್ಯಾರಲ್ ಬಂದೂಕು, 25 ಸಾವಿರ ರೂ. ಮೌಲ್ಯದ 310 ಜೀವಂತ ಗುಂಡುಗಳು, ತಲಾ ಒಂದು ಕತ್ತಿ ಹಾಗೂ ಚಾಕು,

ತೀರ್ಥಹಳ್ಳಿ - ರೆಸಾರ್ಟ್ ಮೇಲೆ ಪೊಲೀಸರ ದಾಳಿ : ಬಂದೂಕು, ಚಾಕು, ಕತ್ತಿ, ಮದ್ಯದ ಬಾಟಲಿಗಳು ವಶ..!

3 ಕಾಡು ಕೋಣದ ಕೊಂಬಿನ ಟ್ರೋಫಿ, 6 ಜಿಂಕೆ ಕೊಂಬಿನ ಟ್ರೊಫಿ, 7659 ರೂ. ಮೌಲ್ಯದ 51 ಬಿಯರ್ ಬಾಟಲಿಗಳು, 1 ಲಕ್ಷ ರೂ. ಮೌಲ್ಯದ ಮದ್ಯ ತುಂಬಿದ ಬಾಟಲಿಗಳು ಮತ್ತು ಸಿಸಿ ಕ್ಯಾಮರಾ ಡಿವಿಆರ್ ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ, ಇನ್ಸ್’ಪೆಕ್ಟರ್ ಅಶ್ವತ್ಥಗೌಡ ನೇತೃತ್ವದಲ್ಲಿ ಸಬ್ ಇನ್ಸ್’ಪೆಕ್ಟರ್ ಸಾಗರ್ ಅತ್ತರವಾಲ, ನವೀನ್ ಕುಮಾರ್ ಮಠಪತಿ, ನವೀನ್ ಕುಮಾರ್ ಅಂತರಗಟ್ಟಿ, ಪ್ರವೀಣ್  ಹಾಗೂ 50 ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →