ಬಿಜೆಪಿ – ಜೆಡಿಎಸ್ ಮೈತ್ರಿಗೆ ತಲೆಕೆಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆ. 8: ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಗೆ ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ವಿಷಯದ ಕುರಿತಂತೆ ಸಿಎಂ ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಜನರ ಹತ್ತಿರ ಮತ ಕೇಳುತ್ತೇವೆ. ಜನ ನಮ್ಮ ಪರವಾಗಿದ್ದಾರೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ

ಬೆಂಗಳೂರು, ಸೆ.08: ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ  ರೋಗದಿಂದ ಕಳೆದ  ಸಾಲಿನಲ್ಲಿ  ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ   ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ಮನವಿ ಮೇರೆಗೆ  ನೆಟೆ ರೋಗ ಸಂತ್ರಸ್ತರಿಗೆ ಬಾಕಿ ಇದ್ದ 223 ಕೋಟಿ ರೂ ಗಳನ್ನು  ಸರ್ಕಾರ ಮಂಜೂರು ಮಾಡಿ 74 ಕೊಟಿ ರೂಗಳನ್ನು  ಬಿಡುಗಡೆ ಮಾಡಿತ್ತು.
ಪ್ರಸ್ತುತ 2ನೇ ಕಂತಿನಲ್ಲಿ 74 ಕೋಟಿ ರೂ ಬಿಡುಗಡೆಗೊಳಿಸಲಾಗಿದೆ. ಬಾಕಿ ಉಳಿದ ರೂ 75 ಕೋಟಿ ಹಣವನ್ನು ಸಹ ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು.
ಇದಕ್ಕಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ ಧನ್ಯವಾದ ಸಮರ್ಪಿಸಿದ್ದು ನಮ್ಮ ಸರ್ಕಾರ  ರೈತರ  ನೆರವಿಗೆ  ಸದಾ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *