ದೇಶದ ಸಂವಿಧಾನ-ಸಾಮರಸ್ಯ ಸಂಸ್ಕೃತಿ ನಮ್ಮ ಶಕ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದ ಸಂವಿಧಾನ-ಸಾಮರಸ್ಯ ಸಂಸ್ಕೃತಿ ನಮ್ಮ ಶಕ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಸೆ. 10: ದೇಶದ ಐಕ್ಯತೆ, ಸಂವಿಧಾನ ಮತ್ತು ಸಮಗ್ರತೆಯನ್ನು ಕಾಪಾಡಿಕೊಳ್ಳಲು ಎಸ್ ಎಸ್ ಎಫ್ ಕೆಲಸ ಮಾಡಬೇಕು. ಇದಕ್ಕಾಗಿ ತಮ್ಮ ಶಕ್ತಿ, ಸಂಘಟನೆಯನ್ನು ಮುಡಿಪಾಗಿ ಇಟ್ಟು ಅಭಿವೃದ್ಧಿ ದಿಕ್ಕಿನಲ್ಲಿ ದೇಶವನ್ನು ವೇಗವಾಗಿ ಮುನ್ನಡೆಸುವ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. 

ಅರಮನೆ ಮೈದಾನದಲ್ಲಿ ನಡೆದ ಸುನ್ನಿ ಸ್ಟೂಡೆಂಟ್ ಫೆಡರೇಷನ್ (SSF) ಗೋಲ್ಡನ್ 50 ಸಮಾವೇಷದಲ್ಲಿ ಮಾತನಾಡಿದರು.

ಸಾಮರಸ್ಯ ಭಾರತದ ಮಣ್ಣಿನ ಗುಣ. 50 ವರ್ಷಗಳಿಂದ ದೇಶದ ಸೌಹಾರ್ದ ಮತ್ತು ಸಾಮರಸ್ಯದ ಸಂಸ್ಕೃತಿ ರಕ್ಷಿಸಲು ಹೋರಾಡುತ್ತಿರುವ ಸಂಘಟನೆ  ಎಂದು ಕೇಳಿದ್ದೇನೆ.  ದೇಶದ ಸಂವಿಧಾನವನ್ನು ಪ್ರತಿಯೊಬ್ಬ ವಿದ್ಯಾರ್ಥಿಗೂ ತಲುಪಿಸಬೇಕು. ಸಂವಿಧಾನದ ಮೌಲ್ಯಗಳು ಉಳಿದರೆ ದೇಶ ಉಳಿಯುತ್ತದೆ ಎಂದರು. 

ಭಾರತ ಪ್ರತಿಯೊಬ್ಬ ಭಾರತೀಯರಿಗೂ ಸೇರಿದ್ದು. ನಮ್ಮ ನಾಡು ಬುದ್ದ, ಬಸವ, ಅಂಬೇಡ್ಕರ್, ಕುವೆಂಪು, ಸೂಫಿ-ಸಂತರ ತಪಸ್ಸು ಮತ್ತು ಮೌಲ್ಯಗಳಿಂದ ರೂಪುಗೊಂಡಿದೆ. ರಾಜ್ಯದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಸಂವಿಧಾನಬದ್ದವಾದ ರಕ್ಷಣೆ ಇದೆ. ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯಕ್ಕೆ, ಕಾನೂನು ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದರು

ಗ್ರಾಂಡ್ ಮಫ್ತಿ ಆಫ್ ಇಂಡಿಯಾ  ಶೇಖ್ ಅಬೂಬ್ ಕರ್ ಅಹಮದ್ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದ ಸಮಾವೇಷದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಜಮೀರ್ ಅಹಮದ್ , ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಾಸಿರ್ ಅಹಮದ್ ಸೇರಿ ಎಸ್ ಎಸ್ ಎಸ್ ನ ರಾಜ್ಯ ಮುಖಂಡರುಗಳು ಮತ್ತು  ಹಲವು ಪ್ರಮುಖರು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *