ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ!

ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ! ಭೂಗತ ಲೋಕಕ್ಕೆ ಪೊಲೀಸರ ಖಡಕ್ ವಾರ್ನಿಂಗ್!!

ಭೂಗತ ಲೋಕಕ್ಕೆ ಪೊಲೀಸರ ಖಡಕ್ ವಾರ್ನಿಂಗ್!!

ಶಿವಮೊಗ್ಗ, ಸೆ. 11: ಬೆಳ್ಳಂಬೆಳಿಗ್ಗೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ನೂರಾರು ರೌಡಿಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ, ತಪಾಸಣೆ ನಡೆಸಿದ ಘಟನೆ ಸೋಮವಾರ ನಡೆದಿದೆ.

ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಾಂತಿ – ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಇಲಾಖೆ ಈ ಕಾರ್ಯಾಚರಣೆ ನಡೆಸಿದೆ. ಈ ಮೂಲಕ ಭೂಗತ ಲೋಕಕ್ಕೆ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ!

ಶಿವಮೊಗ್ಗದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಡಿವೈಎಸ್ಪಿ ಬಾಲರಾಜ್, ಸುರೇಶ್ ಅವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಉಳಿದಂತೆ ಭದ್ರಾವತಿಯಲ್ಲಿ ಡಿವೈಎಸ್ಪಿ ನಾಗರಾಜ್, ಸಾಗರದಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ತಿಮ್ಮಣ್ಣನಾಯ್ಕ್,

ಶಿಕಾರಿಪುರ ಡಿವೈಎಸ್ಪಿ ಶಿವಾನಂದ ಮದರಕಂಡಿ, ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಇದರಲ್ಲಿ ಇನ್ಸ್’ಪೆಕ್ಟರ್, ಸಬ್ ಇನ್ಸ್’ಪೆಕ್ಟರ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳ ನೂರಾರು ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ!

ಶಿವಮೊಗ್ಗ ಎ ಉಪ ವಿಭಾಗದಲ್ಲಿ – 39, ಬಿ ಉಪ ವಿಭಾಗದಲ್ಲಿ – 38, ಭದ್ರಾವತಿ ಉಪ ವಿಭಾಗದಲ್ಲಿ – 72, ಸಾಗರ ಉಪ ವಿಭಾಗದಲ್ಲಿ 21, ಶಿಕಾರಿಪುರ ಉಪ ವಿಭಾಗದಲ್ಲಿ 27, ತೀರ್ಥಹಳ್ಳಿ ಉಪ ವಿಭಾಗದಲ್ಲಿ 44 ಸೇರಿದಂತೆ ಒಟ್ಟಾರೆ 241 ರೌಡಿಗಳ ಮನೆಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ.

ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ!

ದಾಳಿಯ ವೇಳೆ ರೌಡಿ ಆಸಾಮಿಗಳ ಕಾರ್ಯ ಚುಟುವಟಿಕೆಯ ಮಾಹಿತಿ ಕಲೆ ಹಾಕಿದ್ದಾರೆ. ಮನೆಗಳಲ್ಲಿ ಮಾದಕ ವಸ್ತು, ಮಾರಕಾಸ್ತ್ರ ಹೊಂದಿದ್ದಾರೆಯೇ ಎಂಬುವುದನ್ನು ಪರಿಶೀಲಿಸಿದ್ದಾರೆ.

‘ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ವೇಳೆ ಯಾವುದೇ ಕಾನೂನುಬಾಹಿರ ಚಟುವಟಿಕೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ’ ರೌಡಿಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *