ಶಿವಮೊಗ್ಗ ಜಿಲ್ಲೆಯಾದ್ಯಂತ ಸ್ವಚ್ಛತೆಯೇ ಸೇವೆ ವಿಶೇಷ ಜನಾಂದೋಲನ : ಜಿಪಂ ಸಿ.ಇ.ಒ

ಶಿವಮೊಗ್ಗ ಜಿಲ್ಲೆಯಾದ್ಯಂತ ಸ್ವಚ್ಛತೆಯೇ ಸೇವೆ ವಿಶೇಷ ಜನಾಂದೋಲನ : ಜಿಪಂ ಸಿ.ಇ.ಒ

ಶಿವಮೊಗ್ಗ, ಸೆ. 14: ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ ಎಂಬ ವಿಶೇಷ ಜನಾಂದೋಲನವನ್ನು ಸೆ.15 ರಿಂದ ಅ.2 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ತಿಳಿಸಿದ್ದಾರೆ.

ಅ. 2 ರಂದು ಮಹಾತ್ಮ ಗಾಂಧೀಜಿ ಜನ್ಮದಿನದ ಸ್ಮರಣಾರ್ಥವಾಗಿ ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದೆ. ಮಹಾತ್ಮರ ಧ್ಯೆಯ ವಾಕ್ಯ ಸ್ವಚ್ಛತೆಯೇ ದೈವತ್ವ ಎ೦ಬ ಕನಸನ್ನು ನನಸಾಗಿಸಲು ಸೆ.15 ರಿಂದ ಅ.2ರವರೆಗೆ 15 ದಿನಗಳ ಕಾಲ ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ತೀರ್ಮಾನಿಸಲಾಗಿದೆ.

ಈ ವರ್ಷದ ಸ್ವಚ್ಛತಾ ಹಿ ಸೇವಾ, ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನದ ಘೋಷವಾಕ್ಯವಾಗಿ ಕಸಮಕ್ತ, ತ್ಯಾಜ್ಯ ಮುಕ್ತ ಭಾರತ ಎಂದು ಘೋಷಿಸಲಾಗಿದ್ದು, ಎಲ್ಲೆಡೆ ಸದೃಶ್ಯ ಸ್ವಚ್ಛತೆ ಸಾಧಿಸಿ, ಸ್ವಚ್ಛ ಸುಂದರ, ಸಧೃಢ ಗ್ರಾಮಗಳನ್ನು ರೂಪಿಸುವ ಮಹತ್ವಾಕಾಂಕ್ಷಿ ಗುರಿ ಹೊಂದಲಾಗಿದೆ.

ಗ್ರಾಮಗಳ ಸ್ವಚ್ಛತೆಗೆ ಸ್ವಯಂ ಪ್ರೇರಿತರಾಗಿ ಶ್ರಮದಾನ ಚಟುವಟಿಕೆಗಳಲ್ಲಿ ಭಾಗವಹಿಸುವುದು. ಜಿಲ್ಲೆಯ ತಾಲೂಕು, ಗ್ರಾಪಂ ವ್ಯಾಪ್ತಿಗಳಲ್ಲಿ ಹೆಚ್ಚು  ಸಾರ್ವಜನಿಕ ಸ್ಥಳಗಳಾದ ಬಸ್‌ ನಿಲ್ದಾಣ, ರೈಲು ನಿಲ್ದಾಣ, ನದಿ ತೀರ ಸಾಂಸ್ಥಿಕ, ಸಮುದಾಯ ಭವನ, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು, ಚರಂಡಿಗಳು, ಸರ್ಕಾರಿ ಶಾಲೆ,ಅಂಗನವಾಡಿ ಮತ್ತು ನಾಲಾಗಳು ಮುಂತಾದ ಸ್ಥಳಗಳಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮತ್ತು ದೃಶ್ಯ ಸ್ವಚ್ಛತೆ ಕಾಯ್ದುಕೊಳ್ಳಲು ಶ್ರಮದಾನ ಮತ್ತು ವಿವಿಧ ಚಟುವಟಿಕೆಗಳನ್ನು ಆಯೋಜನೆ ಮಾಡಲಾಗಿದೆ.

ಸ್ವಚ್ಛತಾ ಹಿ ಸೇವಾ, ಸ್ವಚ್ಛತೆಯೇ ಸೇವೆಯಲ್ಲಿ ಉತ್ತಮ ಯಶಸ್ವಿಗೊಳಿಸುವ ಉದ್ದೇಶದಿಂದ ಸದೃಢ ಭಾರತ ನಿರ್ಮಾಣಕ್ಕೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರ  ಶ್ರಮ ಅಗತ್ಯವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *