ವಿಕಲಚೇತನರ ಬಸ್ ಪಾಸ್‍ಗೆ ಅರ್ಜಿ ಆಹ್ವಾನ

ಶಿವಮೊಗ್ಗ: 2022ನೇ ಸಾಲಿಗೆ ವಿಕಲಚೇತನರಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್‍ಗಳ ವಿತರಣೆ/ ನವೀಕರಣವನ್ನು ಡಿ.26 ರಿಂದ ಪ್ರಾರಂಭವಾಗಿದ್ದು, 2022ನೇ ಸಾಲಿನಲ್ಲಿ ವಿತರಿಸಲಾಗಿರುವ ಬಸ್ ಪಾಸ್‍ಗಳನ್ನು 2023ರ ಫೆ.28 ರೊಳಗೆ ನವೀಕರಿಸಿಕೊಳ್ಳಲು ಅನುಮತಿಸಲಾಗಿದೆ. 2023ನೇ ಸಾಲಿನಲ್ಲಿ ಹೊಸದಾಗಿ ವಿಕಲಚೇತನರ ಬಸ್ ಪಾಸ್ ಪಡೆಯಲು/ನವೀಕರಣಕ್ಕೆ ಫಲಾನುಭವಿಗಳು ಸರ್ಕಾರ ನಿಗದಿಪಡಿಸಿರುವ ಸೇವಾಸಿಂಧು ಆನ್‍ಲೈನ್ ಪೋರ್ಟಲ್ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತೆ. 2022ನೇ ಸಾಲಿನಲ್ಲಿ ಹೊಸದಾಗಿ ವಿಕಲಚೇತನರ ಬಸ್‍ಪಾಸ್ ಪಡೆಯಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಶಿವಮೊಗ್ಗ ವಿಭಾಗ ಎಂದು ಕೌಂಟರ್ ಆಯ್ಕೆ ಮಾಡುವುದು ಹಾಗೂ 2022ನೇ ಸಾಲಿನಲ್ಲಿ ಬಸ್ ಪಾಸ್ ಪಡೆದಿರುವ ಫಲಾನುಭವಿಗಳು ಪಾಸ್ ನವೀಕರಣಕ್ಕಾಗಿ ಘಟಕ ವ್ಯವಸ್ಥಾಪಕರ ಕೌಂಟರ್ ಆಯ್ಕೆ ಮಾಡಲು ಸೂಚಿಸಿದೆ.
ಅರ್ಜಿದಾರರು ಆನ್‍ಲೈನ್‍ನಲ್ಲಿ ತಮ್ಮ ವಿವರಗಳನ್ನು ಭರ್ತಿ ಮಾಡಿ, ಫಲಾನುಭವಿಗಳ ಭಾವಚಿತ್ರದೊಂದಿಗೆ ಅಗತ್ಯ ದಾಖಲಾತಿಗಳಾದ ಯುಡಿಐಡಿ ಕಾರ್ಡ್, ಡಿಸೆಬಲಿಟಿ ಸರ್ಟಿಫಿಕೇಟ್, ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್‍ನ್ನು ಜೆಪಿಜಿ ಅಥವಾ ಪಿಡಿಎಫ್ ನಮೂನೆಯಲ್ಲಿ ಅಡಕಗೊಳಿಸುವುದು.
ಫಲಾನುಭವಿಗಳು ಪಾಸ್ ಪಡೆಯಲು ಬರುವಾಗ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರಿಂದ ದೃಢೀಕರಿಸಿದ ವಿಕಲಚೇತನರ ಗುರುತಿನ ಚೀಟಿ ಅಥವಾ ಯುಡಿಐಡಿ ಸ್ಮಾಟ್ ಕಾರ್ಡ್, ಡಿಸೆಬಲಿಟಿ ಸರ್ಟಿಫಿಕೇಟ್, ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್, ಇತ್ತೀಚಿನ 3 ಭಾವಚಿತ್ರ ಹಾಗೂ 2022ನೇ ಸಾಲಿನಲ್ಲಿ ಪಡೆದಿರುವ ಮೂಲ ಬಸ್ ಪಾಸ್(ನವೀಕರಣಕ್ಕಾಗಿ)ನೊಂದಿಗೆ ಪಾಸ್ ಶುಲ್ಕ ರೂ.660/-ಗಳನ್ನು ನಗದು ಮೂಲಕ ಪಾವತಿಸಬೇಕಾಗಿ ಕ.ರಾ.ರ.ಸಾ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →