ಇಸ್ರೋ ವಿಜ್ಞಾನಿಯೊಂದಿಗೆ ಸಂವಾದ ಕಾರ್ಯಕ್ರಮ

ಇಸ್ರೋ ವಿಜ್ಞಾನಿಯೊಂದಿಗೆ ಸಂವಾದ ಕಾರ್ಯಕ್ರಮ

ಶಿವಮೊಗ್ಗ, ಸೆ. 19: ಪೋಷಕರ ಮಾರ್ಗದರ್ಶನ, ಇಚ್ಛಾಶಕ್ತಿ ಹಾಗೂ ಗುರುಗಳ ಪ್ರೋತ್ಸಾಹದಿಂದ ವಿಜ್ಞಾನ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಯಿತು ಎಂದು ಚಂದ್ರಯಾನ ಯೋಜನೆ ತಂಡದಲ್ಲಿದ್ದ, ಇಸ್ರೋ ಸಂಸ್ಥೆಯ ವಿಜ್ಞಾನಿ ಪುಟ್ಟಮ್ಮ ಶಿವಾನಿ ಹೇಳಿದರು.

ಶಿವಮೊಗ್ಗ ನಗರದಲ್ಲಿ ಮಕ್ಕಳ ವಿದ್ಯಾಸಂಸ್ಥೆ ಮತ್ತು ತರುಣೋದಯ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ನಂತರ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಭಾರತದ ಇಸ್ರೋ ಸಂಸ್ಥೆಯಲ್ಲಿ ಇಪ್ಪತ್ತು ಸಾವಿರ ಉದ್ಯೋಗಿಗಳು ಇದ್ದು, ಎಲ್ಲಾ ವಿಷಯಗಳ ವಿದ್ಯಾಭ್ಯಾಸ ಮಾಡಿದವರು ಇದ್ದಾರೆ. ಚಂದ್ರಯಾನ ಯಶಸ್ಸಿನಲ್ಲಿ ಎಲ್ಲರ ಸಹಯೋಗ ಶ್ರಮ ಇದೆ ಎಂದು ತಿಳಿಸಿದರು.

ನನ್ನ ಪ್ರಾಥಮಿಕ ಶಾಲಾ ಸ್ನೇಹಿತರು, ಯೂತ್ ಹಾಸ್ಟೇಲ್ಸ್ ಅಸೋಸಿಯೇಷನ್ ತರುಣೋದಯ ಘಟಕದ ಸನ್ಮಾನವನ್ನು ಸಂತೋಷದಿಂದ ಸ್ವೀಕರಿಸಿದ್ದೇನೆ. ನನ್ನ ಸ್ನೇಹಿತರನ್ನು ಕಂಡು ಬಹಳ ಸಂತೋಷ ವಾಗಿದೆ ಎಂದರು.

ಕುಟುಂಬದ ಪ್ರತಿಯೊಬ್ಬರು ನನ್ನ ಏಳಿಗೆಯ ಬೆನ್ನೆಲುಬಾಗಿ ನಿಂತಿದ್ದರು. ಯಾವಾಗಲು ನನ್ನ ಏಳಿಗೆಗೆ ಸಹಕಾರ ಕೊಡುತ್ತಿದ್ದರು. ಇದರಿಂದ ಉನ್ನತ ಮಟ್ಟಕ್ಕೆ ಬೆಳೆಯಲು ಸಹಕಾರಿಯಾಯಿತು. ನನ್ನ ಕುಟುಂಬಕ್ಕೆ ಹೆಚ್ಚಿನ ಸಮಯ ಕೊಡಲು ಸಾಧ್ಯವಾಗಿಲ್ಲ ಅಂದುಕೊಂಡಿದ್ದೇನೆ. ನನ್ನ ಕೆಲಸದ ಒತ್ತಡ ಅಂತಹದ್ದು. ನನ್ನ ಇಬ್ಬರು ಮಕ್ಕಳು ಚನ್ನಾಗಿ ಓದಿಕೊಂಡು ಉತ್ತಮ ಜೀವನ ನಡೆಸುತ್ತಿರುವುದು ಸಂತಸದ ಸಂಗತಿ ಎಂದು ತಿಳಿಸಿದರು.

ಮಕ್ಕಳ ವಿದ್ಯಾ ಸಂಸ್ಥೆ 1982 ನೇ ಸಾಲಿನ ಏಳನೇ ತರಗತಿ ವಿದ್ಯಾರ್ಥಿ ಮಿತ್ರರು ಹಾಗೂ ಯೂತ್ ಹಾಸ್ಟೆಲ್ ತರುಣೋದಯ ಘಟಕದ ಪದಾಧಿಕಾರಿಗಳ ವತಿಯಿಂದ ಇಸ್ರೋ ಸಂಸ್ಥೆಯ ವಿಜ್ಞಾನಿ, ಕೋಣಂದೂರು ಲಿಂಗಪ್ಪ ಪುತ್ರಿ ಪುಟ್ಟಮ್ಮ ಶಿವಾನಿ ಅವರಿಗೆ ಸನ್ಮಾನಿಸಲಾಯಿತು. ಸಂವಾದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಗಣೇಶ್ ಅಂಗಡಿ ಸ್ವಾಗತಿಸಿದರು. ರಾಘವೇಂದ್ರ ನಿರೂಪಿಸಿದರು. ಹಳೆಯ ವಿದ್ಯಾರ್ಥಿಗಳು ಕುಟುಂಬದವರು, ಯೂತ್ ಹಾಸ್ಟೆಲ್ಸ್ ಚೇರ್ಮನ್ ವಾಗೇಶ್, ಸುರೇಶ್ ಕುಮಾರ್, ಡಾ. ಕೌಸ್ತುಭ, ಡಾ. ಶೇಖರ್ ಗೌಳೇರ್, ದಿಲೀಪ್ ನಾಡಿಗ್, ನಾಗರಾಜ್, ಲಕ್ಷ್ಮೀ, ರವೀಂದ್ರ, ಜಿ.ವಿಜಯ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *