ಜೋಗ ಸಮೀಪದ ವಡನ್ ಬೈಲ್ ದೇವಿ ಗುಂಡಿ ಬಳಿ ಈಜಲು ತೆರಳಿದ್ದ ಕೃಷಿ ಅಧಿಕಾರಿ, ಬ್ಯಾಂಕ್ ಸಿಬ್ಬಂದಿ ನೀರುಪಾಲು!

ಜೋಗ ಸಮೀಪದ ವಡನ್ ಬೈಲ್ ದೇವಿ ಗುಂಡಿ ಬಳಿ ಈಜಲು ತೆರಳಿದ್ದ ಕೃಷಿ ಅಧಿಕಾರಿ, ಬ್ಯಾಂಕ್ ಸಿಬ್ಬಂದಿ ನೀರುಪಾಲು!

ಜೋಗಫಾಲ್ಸ್ (ಸಾಗರ), ಸೆ. 24: ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ  ಕೃಷಿ ಅಧಿಕಾರಿ ಹಾಗೂ ಬ್ಯಾಂಕ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ, ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಜೋಗಫಾಲ್ಸ್ ಸಮೀಪದ ವಡನ್ ಬೈಲ್ ಅರಣ್ಯ ಪ್ರದೇಶದಲ್ಲಿರುವ ದೇವಿ ಗುಂಡಿಯಲ್ಲಿ ಭಾನುವಾರ ನಡೆದಿದೆ.

ಸಾಗರದ ಕೃಷಿ ಅಧಿಕಾರಿ ಕುಮಾರ್ ಕೆ ಟಿ (35) ಹಾಗೂ ಐಡಿಎಫ್’ಸಿ ಬ್ಯಾಂಕ್ ಕಲೆಕ್ಟರ್ ಅರುಣ್ (28) ಮೃತಪಟ್ಟವರೆಂದು ಗುರುತಿಸಲಾಗಿದೆ. ಕುಮಾರ್ ಕೆ ಟಿ ಅವರು ಕುಟುಂಬ ಸದಸ್ಯರೊಂದಿಗೆ ದೇವಿ ಬೈಲು ಗುಂಡಿಯ ಬಳಿ ಪ್ರವಾಸಕ್ಕೆಂದು ಆಗಮಿಸಿದ್ದರು. ಇವರ ಜೊತೆ ಅವರ ಸ್ನೇಹಿತರಾದ ಅರುಣ್ ಕೂಡ ತೆರಳಿದ್ದರು.

ಮಧ್ಯಾಹ್ನ ಊಟ ಮಾಡಿದ ನಂತರ, ಇಬ್ಬರು ದೇವಿ ಗುಂಡಿಯಲ್ಲಿ ಈಜಾಡಲು ಇಳಿದಿದ್ದರು. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ತಕ್ಷಣವೇ ಕುಟುಂಬ ಸದಸ್ಯರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕಾರ್ಗಲ್ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಹೊಳೆ ಬಸಪ್ಪ ಮತ್ತವರ ಸಿಬ್ಬಂದಿಗಳು ದೌಡಾಯಿಸಿದ್ದಾರೆ.

ನುರಿತ ಈಜುಗಾರರ ಸಹಾಯದಿಂದ ನೀರಿನಲ್ಲಿ ಮುಳುಗಿದ್ದ ಇಬ್ಬರ ಶವಗಳನ್ನು ಹೊರತೆಗೆದಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಾಗರ ಉಪ ವಿಭಾಗೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *