ಸೆ. 27 – 28 ರಂದು ಶಿವಮೊಗ್ಗ ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಸೆ. 27 – 28 ರಂದು ಶಿವಮೊಗ್ಗ ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಶಿವಮೊಗ್ಗ ತಾಲೂಕು ಗಾಜನೂರಿನ ನವೋದಯ 9 ಹಾಗೂ 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ ನವೋದಯ 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ, ಸೆ. 26: ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲ್ಸೇತುವೆ ಬಳಿ ಸ್ಮಾರ್ಟ್‍ ಸಿಟಿಯಿಂದ ಕೊಳವೆ ಮಾರ್ಗ ಬದಲಾಯಿಸುವ ಕಾಮಗಾರಿ ಕೈಗೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಸೆ. 27 ಮತ್ತು 28 ರಂದು ಬಸವೇಶ್ವರ ನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್‍ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ,

ಶಾರದಮ್ಮ ಬಡಾವಣೆ, ಸಹಕಾರಿನಗರ, ಖಾಜಿ ಖಾನ್ ಬಡಾವಣೆ, ಸೋಮಿನಕೊಪ್ಪ ಹಾಗೂ ಈ ಬಡಾವಣೆಗಳಿಗೆ ಹೊಂದಿಕೊಂಡಂತಹ ಬಡಾವಣೆಗಳಲ್ಲಿ ದೈನಂದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನೀರು ಸರಬರಾಜು ನಿಗಮ ನಿಯಮಿತದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ನವೋದಯ 9 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ, ಸೆ. 26: ಶಿವಮೊಗ್ಗ ತಾಲೂಕು ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ನೇ ಸಾಲಿನ 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ತುಂಬಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ವೆಬ್‍ಸೈಟ್ https://cbseitms.nic.in/2023/nvsix ನಲ್ಲಿ ಸಲ್ಲಿಸಲು ದಿ: 31-10-2023 ಕೊನೆಯ ದಿನಾಂಕವಾಗಿರುತ್ತದೆ. 2023-24 ನೇ ಸಾಲಿನಲ್ಲಿ ಸರ್ಕಾರಿ/ಸರ್ಕಾರೇತರ ಶಾಲೆಯಲ್ಲಿ 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಎಂದು ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

ನವೋದಯ 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ, ಸೆ. 26: ಶಿವಮೊಗ್ಗ ತಾಲೂಕು ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ನೇ ಸಾಲಿನ 11 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ತುಂಬಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಗಳನ್ನು ವೆಬ್‍ಸೈಟ್ https://cbseitms.nic.in/2023/nvsxi_11 ನಲ್ಲಿ ಸಲ್ಲಿಸಲು ದಿ: 31-10-2023 ಕೊನೆಯ ದಿನಾಂಕವಾಗಿರುತ್ತದೆ. 2023-24 ನೇ ಸಾಲಿನಲ್ಲಿ ಸರ್ಕಾರಿ/ಸರ್ಕಾರೇತರ ಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಎಂದು ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *