ಕರ್ನಾಟಕ ಬಂದ್ : ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಕರ್ನಾಟಕ ಬಂದ್ : ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಶಿವಮೊಗ್ಗ, ಸೆ. 29: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ, ಶುಕ್ರವಾರ ಬೆಳ್ಳಂಬೆಳ್ಳಿಗ್ಗೆ ಶಿವಮೊಗ್ಗ ನಗರದ ಕೆ.ಎಸ್.ಆರ್.ಟಿ.ಸಿ  ಬಸ್ ನಿಲ್ದಾಣ ಎದುರು ಕನ್ನಡ ಪರ ಸಂಘಟನೆಗಳು ದಿಢೀರ್ ಪ್ರತಿಭಟನೆ ನಡೆಸಿದವು.

ಈ ವೇಳೆ ಬಸ್ ಗಳ ಸಂಚಾರಕ್ಕೆ ತಡೆಯೊಡ್ಡಲು ಮುಂದಾದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆಯಿತು.

ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಹಾಗೂ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಜಂಟಿಯಾಗಿ ಬಸ್ ನಿಲ್ದಾಣ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಕಾರ್ಯಕರ್ತರು ಸರ್ಕಾರಿ ಬಸ್ ಗಳ ಸಂಚಾರಕ್ಕೆ ತಡೆಯೊಡ್ಡಲು ಮುಂದಾದರು. ಘೋಷಣೆಗಳನ್ನು ಕೂಗಿದರು. ತಕ್ಷಣವೇ ಸ್ಥಳದಲ್ಲಿದ್ದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಕರೆದೊಯ್ದಿದರು. ನಂತರ ಬಿಡುಗಡೆಗೊಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್, ಕರವೇ ಮುಖಂಡ ಕಿರಣ್ ಕುಮಾರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *