‘ಬದುಕಿರುವವರೆಗೂ ಬಿಜೆಪಿ ಜತೆ ಹೋಗಲ್ಲ ಎಂದಿದ್ದ ದೇವೇಗೌಡರು – ಎಲ್ಲೊಯ್ತು ಜಾತ್ಯತೀತ ಮೌಲ್ಯ’ : ಜೆಡಿಎಸ್ ವಿರುದ್ದ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ

‘ಬದುಕಿರುವವರೆಗೂ ಬಿಜೆಪಿ ಜತೆ ಹೋಗಲ್ಲ ಎಂದಿದ್ದ ದೇವೇಗೌಡರು – ಎಲ್ಲೊಯ್ತು ಜಾತ್ಯತೀತ ಮೌಲ್ಯ’ : ಜೆಡಿಎಸ್ ವಿರುದ್ದ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ

ಬೆಂಗಳೂರು ಸೆ. 30: ‘ಜಾತ್ಯತೀತ ಜನತಾದಳದ ಸಂಸ್ಥಾಪಕ ಸದಸ್ಯ ನಾನು. ಬದುಕಿರುವವರೆಗೂ ಬಿಜೆಪಿ ಜತೆ ಸೇರುವುದಿಲ್ಲ ಎಂದು ದೇವೇಗೌಡರು ಹೇಳಿದ್ದರು. ಈಗ ಇದೇ ದೇವೇಗೌಡರು ಬಿಜೆಪಿ ಜತೆ ಕೈಜೋಡಿಸುತ್ತಿದ್ದಾರೆ. ಎಲ್ಲಿ ಹೋಯಿತು ಜಾತ್ಯತೀತ ಮೌಲ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಾಪ್ರಹಾರ ನಡೆಸಿದ್ದಾರೆ.

ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ನಲ್ಲಿ ನೂತನವಾಗಿ ನಿರ್ಮಿಸಿರುವ ಬ್ಯಾರೀಸ್ ಸೌಹಾರ್ದ ಭವನ ಉದ್ಘಾಟಿಸಿ ಅವರು ಮಾತನಾಡಿದರು. ನಾನು ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ಸೇರಿ ಫಾರೂಕ್ ಗೆ ಜೆಡಿಎಸ್ ಗೆ ಹೋಗಬೇಡ. ಕಾಂಗ್ರೆಸ್ ನಿಂದ ರಾಜ್ಯಸಭೆಗೆ ಹೋಗು ಎಂದು ಎಷ್ಟೇ ಹೇಳಿದರೂ ಕೇಳಲಿಲ್ಲ. ಈಗ ಏನಾಗಿದೆ ನೋಡಿ ಎಂದು ಹೇಳಿದರು.

ಸಂವಿಧಾನದ ಮೌಲ್ಯವನ್ನು ತನ್ನ ಮೌಲ್ಯವಾಗಿ ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಆಗಿದೆ. ಭಾರತದ ವೈವಿಧ್ಯತೆಯನ್ನು ಮತ್ತು ಏಕತೆಯನ್ನು ಇತರೆ ದೇಶಗಳಲ್ಲಿ ಕಾಣಲು ಸಾಧ್ಯವಿಲ್ಲ. ಭಿನ್ನ ಸಂಸ್ಕೃತಿಗಳ ನಡುವೆ ಸಮನ್ವಯ, ಸೌಹಾರ್ದ ಇಲ್ಲದೇ ಹೋದರೆ ಆ ದೇಶದಲ್ಲಿ, ಆ ಸಮಾಜದಲ್ಲಿ ನೆಮ್ಮದಿ ಇರಲು ಸಾಧ್ಯವಿಲ್ಲ. ನೆಮ್ಮದಿ ಇಲ್ಲದ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದರು.

ಮೊಯ್ದೀನ್ ಅವರು ಸೌಹಾರ್ದತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದರು. ಪರಸ್ಪರ ಅಪನಂಬಿಕೆ ಮತ್ತು ದ್ವೇಷವನ್ನು ಬಿತ್ತುವವರು ಈ ದೇಶದ ಅವನತಿಗೆ ಕಾರಣ ಆಗುತ್ತಾರೆ. ನಮ್ಮ ಸಂವಿಧಾನ ಜಾತ್ಯತೀತತೆಯನ್ನು , ಸೌಹಾರ್ದತೆಯನ್ನು ಎತ್ತಿ ಹಿಡಿದಿದೆ. ಭಾರತದಲ್ಲಿ ಜಾತ್ಯತೀತ ಮೌಲ್ಯವನ್ನು ಮತ್ತು ಸಂವಿಧಾನದ ಮೌಲ್ಯವನ್ನು ತನ್ನ ಮೌಲ್ಯವಾಗಿ ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಎಂದು ವಿವರಿಸಿದರು.

ಕಾನೂನು ಕೈಗೆತ್ತಿಕೊಂಡರೆ ಕ್ರಮ : ನಮ್ಮ ಆಡಳಿತದಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶವಿಲ್ಲ. ಎಷ್ಟೇ ರಾಜಕೀಯ ಶಕ್ತಿ ಹೊಂದಿದ್ದರೂ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಖಚಿತ. ಎಲ್ಲಾ ಜಾತಿ, ಧರ್ಮದವರಿಗೂ ಅವರ ಸಂವಿಧಾನಬದ್ದ ಹಕ್ಕುಗಳನ್ನು ಆಚರಿಸಲು ಅವಕಾಶವಿದೆ. ಇದಕ್ಕೆ ಯಾರೇ ಅಡ್ಡಿಯುಂಟು ಮಾಡಿದರೂ ಕ್ರಮ ಖಚಿತ ಎಂದು ಎಚ್ಚರಿಸಿದರು.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹಮದ್, ಬ್ಯಾರೀಸ್ ಸೌಹಾರ್ದ ಭವನ ಸಮಿತಿಯ ಅಧ್ಯಕ್ಷರಾದ ಸಯ್ಯದ್ ಮಹಮದ್ ಬ್ಯಾರಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *