ವಿಐಎಸ್ಎಲ್ ಕಾರ್ಮಿಕರೊಂದಿಗೆ ಸಿಎಂ ಮಹತ್ವದ ಸಭೆ!

ಶಿವಮೊಗ್ಗ, ಫೆ. 8: ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ  ಕಾರ್ಖಾನೆಯನ್ನು ಉಳಿಸಲು ಎಲ್ಲ ಪ್ರಯತ್ನ ಮಾಡಲಾಗುವುದು ಹಾಗೂ ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮನ್ನು ಭೇಟಿ ಮಾಡಿದ ವಿ ಐ ಎಸ್ ಎಲ್ ಕಾರ್ಮಿಕರ ನಿಯೋಗದೊಂದಿಗೆ ಮಾತನಾಡಿದರು. 

ವಿ ಐ ಎಸ್ ಎಲ್ ಅತ್ಯಂತ ಮಹತ್ವದ ಕಾರ್ಖಾನೆ.  ಜಾಗತೀಕರಣದ ಪರಿಣಾಮ ಅನೇಕ ಸಾರ್ವಜನಿಕ ಸಂಸ್ಥೆಗಳು ಮುಚ್ಚಿವೆ . ವಿ ಐ ಎಸ್ ಎಲ್ ಕಾರ್ಖಾನೆಯು  ಬಿ.ಎಸ್. ಯಡಿಯೂರಪ್ಪ ಅವರ ಪ್ರಯತ್ನದಿಂದ ಉಳಿದುಕೊಂಡು ಬಂದಿದೆ ಎಂದರು. 

ಕೇಂದ್ರ ಸರ್ಕಾರ ಡಿಸ್ಇನ್ವೆಸ್ಟ್ ಮೆಂಟ್ ಯೊಜನೆ ಅಡಿಯಲ್ಲಿ ಈ ಕಾರ್ಖಾನೆ ಮುಚ್ಚಲು ಪ್ರಕ್ರಿಯೆ ಆರಂಭಿಸಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. 

ನಮ್ಮ ರಾಜ್ಯದ ಕಬ್ಬಿಣದ ಅದಿರಿಗೆ ಸಾಕಷ್ಟು ಬೆಲೆ‌ ಇದೆ. ಜಿಂದಾಲ್ ಸಂಸ್ಥೆ ಅಷ್ಟು ದೊಡ್ಡ ಮಟ್ಟದಲ್ಲಿ ಬೆಳೆದಿರಬೇಕಾದರೆ, ಈ ಸಂಸ್ಥೆ ಉಳಿಸಲು ನಾವು ಪ್ರಯತ್ನ ಮಾಡುತ್ತೇವೆ. ಮೊದಲು ಕ್ಲೋಸರ್ ಪ್ರಕ್ರಿಯೆ ನಿಲ್ಲಿಸಲು ಪ್ರಯತ್ನ ಮಾಡಲಾಗುವುದು. ಬೇರೆ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →