ಶಿವಮೊಗ್ಗ ನಗರಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ!

ಶಿವಮೊಗ್ಗ ನಗರಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ!

ಶಿವಮೊಗ್ಗ, ಅ. 2: ಶಿವಮೊಗ್ಗದ ಶಾಂತಿನಗರದಲ್ಲಿ ಭಾನುವಾರ ಸಂಜೆ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ನಗರಾದ್ಯಂತ ಶಾಂತಿ – ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ, ಅ. 1 ರ ಮಧ್ಯರಾತ್ರಿ 12 ಗಂಟೆಯಿಂದ ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಸೂಕ್ತ ಸಹಕಾರ ನೀಡಬೇಕು ಎಂದು ಡಿಸಿ ಮನವಿ ಮಾಡಿದ್ದಾರೆ.

ನಿಬಂಧನೆಗಳು : ನಿಷೇಧಾಜ್ಞೆ ವೇಳೆ 5 ಜನರು ಹಾಗೂ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು ಮತ್ತು ಓಡಾಡುವುದನ್ನು ನಿರ್ಬಂಧಿಸಲಾಗಿದೆ. ನಿಷೇಧಾಜ್ಞೆ ವೇಳೆ ಯಾವುದೇ ಪ್ರತಿಭಟನೆ, ಮೆರವಣಿಗೆ, ಸಭೆ-ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ.

ಯಾವುದೇ ರೀತಿಯ ಘೋಷಣೆ ಕೂಗುವುದು, ಪ್ರಚೋದನಕಾರಿ ಹೇಳಿಕೆ ನೀಡುವುದು, ಪ್ರಚೋದನಕಾರಿ ಫ್ಲೆಕ್ಸ್, ಬಂಟಿಂಗ್ಸ್, ಬ್ಯಾನರ್, ಕಟ್ಟುವುದನ್ನು ನಿರ್ಬಂಧಿಸಲಾಗಿದೆ. ಯಾವುದೇ ರೀತಿಯ ಮಾರಕಾಸ್ತ್ರ ಹಿಡಿದು ಓಡಾಡುವಂತಿಲ್ಲ. ಸ್ಫೋಟಕ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ.

ಈ ಹಿಂದೆ ಪೂರ್ವಾನುಮತಿ ಪಡೆದು ನಿಗದಿಯಾದಂತ ಕಾರ್ಯಕ್ರಮಗಳನ್ನು ನಡೆಸಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *