ಶಿವಮೊಗ್ಗದ ರಾಗಿಗುಡ್ಡ ಪ್ರಕರಣ : ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ – ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಮೊಗ್ಗದ ರಾಗಿಗುಡ್ಡ ಪ್ರಕರಣ : ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ - ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಅ. 3: ‘ನಮ್ಮ ಸರ್ಕಾರ ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಪ್ರಕರಣಗಳನ್ನು ನಿಯಂತ್ರಿಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಕೋಮು ಗಲಭೆ ಹೆಚ್ಚಾಗಿದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರಿಗೆ ಆರೋಪ ಮಾಡುವುದೇ ಕೆಲಸವಾಗಿದೆ. ಆರೋಪ ಮಾಡುವುದೆಲ್ಲ ಸತ್ಯವಲ್ಲ. ಶಿವಮೊಗ್ಗದ ಪ್ರಕರಣದಲ್ಲಿ ಕಲ್ಲು ಹೊಡೆದ ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು  ಎಂದರು.

ಪ್ರತಿಭಟನೆಗೆ ಸಕಾರಣವಿರಬೇಕು : ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಉತ್ತರಿಸಿ, ಯಾರು ಬೇಕಾದರೂ ಪ್ರತಿಭಟನೆ ಮಾಡಬಹುದು. ಆದರೆ ಆ ಪ್ರತಿಭಟನೆಗೆ ಸಕಾರಣವಿರಬೇಕು ಮತ್ತು ಶಾಂತಿಯುತವಾಗಿ ನಡೆಯಬೇಕು ಎಂದರು.

ಯಾರಿಗೂ ಅನ್ಯಾಯವಾಗಿಲ್ಲ : ಕುರುಬ ಸಮಾಜ ಸಮಾವೇಶದ ಸಂದರ್ಭದಲ್ಲಿ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂಬ ಕೂಗು ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಮ್ಮ ಸರ್ಕಾರದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ. ಎಲ್ಲರನ್ನೂ ಒಳಗೊಂಡಂತಹ ಆಡಳಿತದ ನೀತಿ ನಮ್ಮ ಸರ್ಕಾರ ಹೊಂದಿದೆ ಎಂದರು.

ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಉಪ ಮುಖ್ಯಮಂತ್ರಿಗಳು  ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಒಕ್ಕಲಿಗರ ಹೋರಾಟ ಸಮಿತಿ ನೀಡಿದ ಪತ್ರವನ್ನು ಆಧರಿಸಿ, ಉಪ ಮುಖ್ಯಮಂತ್ರಿಗಳು ನನಗೆ ಪತ್ರ ಬರೆದಿದ್ದಾರೆ. ಇಂದಷ್ಟೇ ಆ ಪತ್ರ ನೋಡಿದ್ದೇನೆ ಎಂದು ತಿಳಿಸಿದರು.

ತಮ್ಮ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯ ವಿಭಜನೆ ಆಗಲಿದೆಯೇ ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಶಾಸಕರ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *