ಕುರುಬ ಸಮುದಾಯವನ್ನು ಎಸ್.ಟಿ. ಗೆ ಸೇರಿಸಲು ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ಕುರುಬ ಸಮುದಾಯವನ್ನು ಎಸ್.ಟಿ. ಗೆ ಸೇರಿಸಲು ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ಬೆಳಗಾವಿ ಅ. 3: ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಇನ್ನೂ ಕೂಡ ಅನೇಕ ಜಾತಿಗಳು  ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಿಲ್ಲ.  ದೇಶದಲ್ಲಿ  ಹಾಗೂ ಕರ್ನಾಟಕದಲ್ಲಿ ಈಗಲೂ ಇಂಥ ಸ್ಥಿತಿ ಇದೆ ಎಂದು ಮುಖ್ಯವಾಹಿನಿಗೆ ಬರದೇ ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದಿಸಿದರು.  

ಬೆಳಗಾವಿಯ ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ  ಇಂದು  ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ 9ನೇ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಜಾತಿ ವ್ಯವಸ್ಥೆಯ ಸಮಾಜದಲ್ಲಿ ವಾಸ್ತವಿಕ  ಅಂಶಗಳನ್ನು ಅರ್ಥಮಾಡಿಕೊಂಡು ಅದರಂತೆ ನಡೆಯಬೇಕಾದುದ್ದು ನಮ್ಮ ಕರ್ತವ್ಯ.  ಈ ದೃಷ್ಟಿಯಿಂದ ಇಂಥ ಸಂಘಟನೆ, ಸಮಾವೇಶಗಳು ಅತ್ಯಂತ ಅವಶ್ಯಕ. ಅಧಿಕಾರ ವಿಕೇಂದ್ರೀರಣವಾಗಿ, ಗ್ರಾಮ ಸ್ವರಾಜ್ಯವಾಗಬೇಕು ಎಂದು ಗಾಂಧಿಜೀ ಹೇಳಿದ್ದರು .  

ಪ್ರಾತಿನಿಧ್ಯ ಅತ್ಯಗತ್ಯ : ಕುರುಬ ಸಮಾಜ ಸಂಘಟಿತವಾಗಿ ಉತ್ತಮ ಕೆಲಸ ಮಾಡಿದೆ. ರಾಜಕೀಯ ಶಕ್ತಿ ಬೆಳೆದು ಎಲ್ಲರಿಗೂ ಅಧಿಕಾರದಲ್ಲಿ ಪಾಲು ಸಿಗಬೇಕು.  ಯಾವುದೇ ಸಮಾಜದ ಪ್ರಗತಿಗೆ ರಾಜಕೀಯ ಪ್ರಾತಿನಿಧ್ಯ ಅತ್ಯಗತ್ಯ. ನಿಮ್ಮ ಪರವಾಗಿ ಧ್ವನಿ ಎತ್ತುವವರು ಇಲ್ಲದಿದ್ದಾಗ ಆ ಸಮುದಾಯ ಹಿಂದುಳಿಯುತ್ತದೆ. ಸಂಘಟನೆ ಮಾಡಿ, ರಾಜಕೀಯವಾಗಿ ಬೆಳೆಯುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದರು.

ಎಸ್ ಟಿ ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ : ಎಲ್ಲ ಜಾತಿಯವರನ್ನೂ ಒಳಗೊಂಡು ಸರ್ಕಾರವನ್ನು ನಡೆಸುವಂತಹ ಶಕ್ತಿ ಕೊಡು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅನೇಕ ರಾಜ್ಯಗಳಲ್ಲಿ ಕುರುಬ ಸಮುದಾಯದವರು ಎಸ್ ಸಿ, ಎಸ್.ಟಿ., ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದಲ್ಲಿಯೂ ಇದ್ದಾರೆ. 

ಗುಲ್ಬರ್ಗ , ಬೀದರ್ , ಯಾದಗಿರಿಯಲ್ಲಿ ಗೊಂಡ, ರಾಜಗೊಂಡ ಕುರುಬ ಸಮುದಾಯದವರು ಎಸ್ ಟಿ ಗೆ ಸೇರಿದರೆ, ಕೊಡಗು ಜಿಲ್ಲೆಯಲ್ಲಿ ಎಲ್ಲ ಕುರುಬರು ಎಸ್ ಟಿ ಗೆ ಸೇರಿದ್ದಾರೆ.  ಗುಲ್ಬರ್ಗ , ಬೀದರ್ , ಯಾದಗಿರಿಯಲ್ಲಿ  ಕುರುಬರು ಮತ್ತು ಗೊಂಡ ಸಮುದಾಯದವರು ಒಂದೇ ಆಗಿದ್ದು, ಈ ಸಮುದಾಯಗಳನ್ನು ಎಸ್ ಟಿ ಗೆ ಸೇರಿಸಬೇಕು ಎಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ.

ಈಗ ಈ ವಿಚಾರವು ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ಗೊಲ್ಲರು, ಕುರುಬರು, ಕೋಳಿ ಸಮಾಜವು ಸೇರಿದಂತೆ ವಿವಿಧ ಸಮಾಜಗಳನ್ನು ಎಸ್ ಟಿ ಸಮುದಾಯಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *