
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮನೆಗಳ ಮೇಲೆ ಇಡಿ ರೈಡ್!
ಶಿವಮೊಗ್ಗ / ತೀರ್ಥಹಳ್ಳಿ, ಅ. 5: ಇತ್ತೀಚೆಗಷ್ಟೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ, ಕಾಂಗ್ರೆಸ್ ಮುಖಂಡ ಆರ್.ಎಂ.ಮಂಜುನಾಥಗೌಡ ಅವರಿಗೆ ಸೇರಿದ ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿರುವ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳ ತಂಡ ಗುರುವಾರ ಮುಂಜಾನೆ ದಾಳಿ ನಡೆಸಿ ತಪಾಸಣೆ ನಡೆಸುತ್ತಿರುವ ಘಟನೆ ಬೆಳಕಿಗೆ ಬಂದಿದೆ,
ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ಮನೆ, ಹಣಗೆರೆಕೆಟ್ಟೆ ಸಮೀಪದ ಕರಕುಚ್ಚಿ ಮನೆ, ಶಿವಮೊಗ್ಗದ ಶರಾವತಿ ನಗರದಲ್ಲಿರುವ ಸಂಬಂಧಿ ಮನೆ ಹಾಗೂ ಕಚೇರಿಗಳಲ್ಲಿ ಇಡಿ ಅಧಿಕಾರಿಗಳ ತಂಡ ತಪಾಸಣೆ ನಡೆಸುತ್ತಿದೆ ಎಂದು ಹೇಳಲಾಗಿದೆ.
ಐದಾರು ತಂಡ ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಶಸ್ತ್ರಸಜ್ಜಿತ ಪೊಲೀಸರ ಭದ್ರತೆಯೊಂದಿಗೆ ಇಡಿ ತಂಡ ಆರ್.ಎಂ.ಮಂಜುನಾಥಗೌಡರ ನಿವಾಸಗಳಲ್ಲಿ ತಪಾಸಣೆ ನಡೆಸುತ್ತಿದೆ.
ಡಿಸಿಸಿ ಬ್ಯಾಂಕ್ ನಲ್ಲಿ ಕಳೆದ ಹಲವು ವರ್ಷಗಳ ಹಿಂದೆ ನಡೆದ ನಕಲಿ ಬಂಗಾರ ಅಡಮಾನ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಇನ್ನಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.
More Stories
shimoga news | ಶಿವಮೊಗ್ಗ ಸೈಬರ್ ಕ್ರೈಂ ಠಾಣೆ ಪೊಲೀಸರ ಯಶಸ್ವಿ ತನಿಖೆ..!
Shivamogga Cyber Crime Station police return Rs 19 lakhs to the heirs who had been robbed of their belongings!
ವಂಚಕರ ಪಾಲಾಗಿದ್ದ 19 ಲಕ್ಷ ರೂ. ಮರಳಿ ವಾರಸುದಾರರಿಗೆ ಕೊಡಿಸಿದ ಶಿವಮೊಗ್ಗ ಸೈಬರ್ ಕ್ರೈಂ ಠಾಣೆ ಪೊಲೀಸರು!
bhadravati | ಭದ್ರಾವತಿ | ಹೊಳೆಹೊನ್ನೂರು : ಯುವಕನ ಮೇಲೆ ಮಚ್ಚಿನಿಂದ ದಾಳಿ ಪ್ರಕರಣ – ನಾಲ್ವರ ಬಂಧನ!
Shivamogga: Case of attack on a young man with a machete – four arrested!
ಭದ್ರಾವತಿ : ಯುವಕನ ಮೇಲೆ ಮಚ್ಚಿನಿಂದ ದಾಳಿ ಪ್ರಕರಣ – ನಾಲ್ವರ ಬಂಧನ!
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಅಕ್ಟೋಬರ್ 20 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for October 10 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಅಕ್ಟೋಬರ್ 20 ರ ತರಕಾರಿ ಬೆಲೆಗಳ ವಿವರ
shimoga rain | ಶಿವಮೊಗ್ಗ : ದೀಪಾವಳಿಗೂ ಮುನ್ನ ಭರ್ಜರಿ ಮಳೆ!
Shivamogga: Heavy rain before Diwali!
ಶಿವಮೊಗ್ಗ : ದೀಪಾವಳಿಗೂ ಮುನ್ನ ಭರ್ಜರಿ ಮಳೆ!
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಅಕ್ಟೋಬರ್ 19 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for October 10 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆ
shimoga news | ಶಿವಮೊಗ್ಗ ಜಿಲ್ಲೆಯ ಪಟಾಕಿ ಮಾರಾಟ ಅಂಗಡಿಗಳಲ್ಲಿ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ!
Children under 18 years of age banned from fireworks shops in Shivamogga district!
ಶಿವಮೊಗ್ಗ ಜಿಲ್ಲೆಯ ಪಟಾಕಿ ಮಾರಾಟ ಅಂಗಡಿಗಳಲ್ಲಿ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ