ಶಿವಮೊಗ್ಗ ನಗರದ ವಿವಿಧೆಡೆ ಅ. 12, 13 ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಶಿವಮೊಗ್ಗ, ಅ. 12: ಶಿವಮೊಗ್ಗ ನಗರದ ನೀರು ಶುದ್ದೀಕರಣ ಕೇಂದ್ರದಲ್ಲಿನ ಕೊಳವೆ ಮಾರ್ಗದಲ್ಲಿ, ತುರ್ತು ದುರಸ್ಥಿ ಕಾರ್ಯ ಕೈಗೊಳ್ಳುತ್ತಿರುವುದರಿಂದ, ಅ. 12 ಮತ್ತು 13 ರಂದು ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿ ಎಂದು ಜಲ ಮಂಡಳಿ ತಿಳಿಸಿದೆ.

ನಗರದ ಮಿಳಘಟ್ಟ, ತುಂಗಾನಗರ, ಪಿ.ಡಬ್ಲ್ಯೂಡಿ ಟ್ಯಾಂಕ್ (ಮಾರ್ನಮಿಬೈಲ್), ಜಿಲ್ಲಾ ಪಂಚಾಯತ್ ಕಚೇರಿ ಎದರು, ರವೀಂದ್ರನಗರ, ಸ್ಟೇಡಿಯಂ ಟ್ಯಾಂಕ್, ಶಿವಮೂರ್ತಿ ಸರ್ಕಲ್ ಟ್ಯಾಂಕ್‍ಗಳಿಗೆ ಹೊಂದಿಕೊಂಡಿರುವ ಬಡಾವಣೆಗಳಿಗೆ ದೈನಂದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಜಲ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *