ಕರ್ನಾಟಕ ಸಂಭ್ರಮ -50 : ವಿಭಿನ್ನ ಕಾರ್ಯಕ್ರಮಗಳ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ – ಶಿವಮೊಗ್ಗ ಡಿಸಿ ಮಾಹಿತಿ

ಶಿವಮೊಗ್ಗ, ಅ. 30: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಈ ಕುರಿತಂತೆ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ನವೆಂಬರ್ 01 ರಂದು ಜಿಲ್ಲೆಯಾದ್ಯಂತ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಯೊಂದಿಗೆ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯದ ರಂಗೋಲಿ ಬಿಡಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ.

ನವೆಂಬರ್ 01 ರ ಬೆಳಿಗ್ಗೆ 9 ಗಂಟೆಗೆ ಆಕಾಶವಾಣಿಯಲ್ಲಿ ನಾಡಗೀತೆ ಪ್ರಸಾರವಾಗಲಿದೆ. ಆ ಸಮಯದಲ್ಲಿ ಜಿಲ್ಲೆಯ ಸಮಸ್ತ ನಾಗರೀಕರು ಎದ್ದು ನಿಂತು ಗೌರವ ಸಲ್ಲಿಸಬೇಕು.

ನವೆಂಬರ್ 01 ರ ಸಂಜೆ 5 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಗಾಳಿ ಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿ ಪಟ ಉತ್ಸವ ಆಚರಿಸಲಾಗುತ್ತದೆ.

ನವೆಂಬರ್ 01 ರಂದು ಸಂಜೆ 7 ಗಂಟೆಗೆ ಜಿಲ್ಲೆಯ ಎಲ್ಲಾ ಮನೆ-ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸುವ ಕಾರ್ಯಕ್ರಮ ವಿದೆ.

ಜಿಲ್ಲೆಯ ಸಮಸ್ತ ನಾಗರೀಕರು ಹಾಗೂ ಕನ್ನಡ ಪರ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳು, ನಾಡು-ನುಡಿಯ ಅಭಿಮಾನದೊಂದಿಗೆ ಪ್ರತಿಯೊಬ್ಬರು ಈ ಎಲ್ಲ ಅಂಶಗಳನ್ನು ಅಳವಡಿಸಿಕೊಂಡು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಮನವಿ ಮಾಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *