ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ : ಶಿವಮೊಗ್ಗದಲ್ಲಿ ಸಂಭ್ರಮಾಚರಣೆ!

B Y Vijayendra as BJP State President : Celebration in Shimoga! ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ : ಶಿವಮೊಗ್ಗದಲ್ಲಿ ಸಂಭ್ರಮಾಚರಣೆ!

ಶಿವಮೊಗ್ಗ, ನ. 11: ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಶನಿವಾರ ಶಿವಮೊಗ್ಗ ನಗರದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.

ವಿನೋಬನಗರದಲ್ಲಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಎದುರು ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ, ಪಕ್ಷದ ಮುಖಂಡರ ಪರವಾಗಿ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಕಾರ್ಯಕರ್ತರಿಗೆ ಸಿಹಿ ತಿನ್ನಿಸಿ ಸಂತಸ ವ್ಯಕ್ತಪಡಿಸಿದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *