ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪೊಲೀಸರಿಂದ ಸಾರ್ವಜನಿಕ ಸ್ಥಳಗಳಲ್ಲಿ ಬ್ರೀಫಿಂಗ್ : ಕುಂದುಕೊರತೆ ಸಭೆ

Briefing in public places by police at various places in Shimoga district: Grievance meeting ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪೊಲೀಸರಿಂದ ಸಾರ್ವಜನಿಕ ಸ್ಥಳಗಳಲ್ಲಿ ಬ್ರೀಫಿಂಗ್ : ಕುಂದುಕೊರತೆ ಸಭೆ

ಶಿವಮೊಗ್ಗ, ನ. 12: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ  ಭಾನುವಾರ  ಪೊಲೀಸರು ಸಾರ್ವಜನಿಕ ಸ್ಥಗಳಲ್ಲಿ ಬ್ರೀಫಿಂಗ್ ಸಭೆ ನಡೆಸಿದರು. ಹಾಗೆಯೇ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ನಿವಾಸಿಗಳು ವಾಸಿಸುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಿ ಅಹವಾಲು ಆಲಿಸಿದರು.

ಬ್ರೀಫಿಂಗ್: ಶಿವಮೊಗ್ಗ ನಗರದ  ವಿನಾಯಕ ಸರ್ಕಲ್, ವಿನೋಬನಗರದ ಶಿವಾಲಯ, KSRTC ಡಿಪೋ, ಓಲ್ಡ್ ಬಾರ್ ಲೈನ್ ರೋಡ್, ಜಯನಗ ರ, ತಾಲೂಕಿನ ಕುಂಸಿ ಗ್ರಾಮ, ಭದ್ರಾವತಿಯ ರೈಲ್ವೆ ಸ್ಟೇಷನ್, ತೀರ್ಥಹಳ್ಳಿಯ ರಥ ಬೀದಿ, ಆಗುಂಬೆ,

ಹೊಸನಗರ ತಾಲೂಕಿನ ರಿಪ್ಪನ್ ಪೇಟೆ, ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಟೌನ್, ಸೊರಬ ಟೌನ್, ತಾಲೂಕಿನ ಕಾರ್ಗಲ್ ನ ತಲಕಳಲೆಯಲ್ಲಿ ಆಯಾ ಠಾಣೆಗಳ ಬ್ರೀಫಿಂಗ್ ಸಭೆಗಳು ನಡೆದವು.

ಠಾಣೆಗಳ ಠಾಣಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆದವು. ನಿರ್ವಹಿಸಬೇಕಾದ ಕರ್ತವ್ಯ ಮತ್ತು ಮೇಲಾಧಿಕಾರಿಗಳ ಸೂಚನೆಗಳ ಬಗ್ಗೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.

ಕುಂದುಕೊರತೆ ಸಭೆ: ಜಿಲ್ಲೆಯ ಪ್ರತಿಯೊಂದು ಠಾಣಾ ವ್ಯಾಪ್ತಿಯ ಪರಿಶಿಷ್ಟ ಜಾತಿ – ಪಂಗಡಗಳ ನಿವಾಸಿಗಳು ವಾಸಿಸುತ್ತಿರುವ ಪ್ರದೇಶಗಳಲ್ಲಿ, ಇನ್ಸ್’ಪೆಕ್ಟರ್ ಹಾಗೂ ಸಬ್ ಇನ್ಸ್’ಪೆಕ್ಟರ್ ಗಳ ನೇತೃತ್ವದಲ್ಲಿ ಕುಂದುಕೊರತೆ ಸಭೆಗಳು ನಡೆದವು.

ಈ ವೇಳೆ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮುದಾಯಗಳ ಕುಂದುಕೊರತೆಗಳನ್ನು ಪೊಲೀಸರು ಆಲಿಸಿದರು. ನಾಗರೀಕರ ಅಹವಾಲುಗಳಿಗೆ ಕಾಲಮಿತಿಯೊಳಗೆ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.  

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *