ಕಾರಿನಲ್ಲಿ ಗಾಂಜಾ ಮಾರಾಟ : ಶಿವಮೊಗ್ಗದಲ್ಲಿ ಇಬ್ಬರು ಯುವಕರ ಬಂಧನ!

Selling ganja in a car : Two youths arrested in Shimoga! ಕಾರಿನಲ್ಲಿ ಗಾಂಜಾ ಮಾರಾಟ : ಶಿವಮೊಗ್ಗದಲ್ಲಿ ಇಬ್ಬರು ಯುವಕರ ಬಂಧನ!

ಶಿವಮೊಗ್ಗ, ನ. 14: ಕಾರಿನಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ನ. 13 ರಂದು ಶಿವಮೊಗ್ಗ ನಗರದ ಹೊರವಲಯ ಅನುಪಿನಕಟ್ಟೆ ರಸ್ತೆಯ ತುಂಗಾ ನಾಲೆ ಸೇತುವೆ ಬಳಿ ನಡೆದಿದೆ.

ಸಾಗರ ಪಟ್ಟಣದ ರಾಮನಗರದ ನಿವಾಸಿ ಅಲ್ತಾಫ್ ಯಾನೆ ಮಚ್ಚಿ (38) ಹಾಗೂ ಶಿವಮೊಗ್ಗದ ಟಿಪ್ಪುನಗರದ ನಿವಾಸಿ ಇನಾಯತ್ (29) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಆರೋಪಿಗಳಿಂದ 2,10,000 ರೂ. ಮೌಲ್ಯದ 5 ಕೆ.ಜಿ 250 ಗ್ರಾಂ ತೂಕದ ಒಣ ಗಾಂಜಾ, 2,50,000 ರೂ. ಮೌಲ್ಯದ ಸ್ಕೋಡ ಕಾರು, 2 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಬಾಲರಾಜ್, ಇನ್ಸ್’ಪೆಕ್ಟರ್ ಮಂಜುನಾಥ್, ಸಬ್ ಇನ್ಸ್’ಪೆಕ್ಟರ್ ಶಿವಪ್ರಸಾದ್ ಮತ್ತವರ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *