ನಗರ – ಪಟ್ಟಣ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನೆನೆಗುದಿಗೆ : ಶಾಸಕ ಡಿ.ಎಸ್.ಅರುಣ್ ತೀವ್ರ ಅಸಮಾಧಾನ!

City-Town Local Bodies President-Vice-President Election to Nenegudi: MLA D.S. Arun is very upset - Appeal to Municipal Administration Minister ನಗರ–ಪಟ್ಟಣ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನೆನೆಗುದಿಗೆ : ಶಾಸಕ ಡಿ.ಎಸ್.ಅರುಣ್ ತೀವ್ರ ಅಸಮಾಧಾನ – ಪೌರಾಡಳಿತ ಸಚಿವರಿಗೆ ಮನವಿ

ಬೆಳಗಾವಿ / ಶಿವಮೊಗ್ಗ, ಡಿ. 5: ಅವಧಿ ಪೂರ್ಣಗೊಂಡಿರುವ ನಗರ-ಪಟ್ಟಣ ಸ್ಥಳೀಯ ಸಂಸ್ಥೆ (ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ) ಗಳ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳಿಗೆ, ಕಾಲಮಿತಿಯೊಳಗೆ ಮೀಸಲಾತಿ ಪ್ರಕಟಿಸಿ ಚುನಾವಣೆ ನಡೆಸುವಂತೆ, ಶಿವಮೊಗ್ಗ ಕ್ಷೇತ್ರದ ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಸಂಬಂಧ ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ, ಪೌರಾಡಳಿತ ಸಚಿವ ರಹೀಂಖಾನ್ ಹಾಗೂ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಅವರನ್ನು ಡಿ.ಎಸ್.ಅರುಣ್ ನೇತೃತ್ವದ ವಿಪ ಶಾಸಕರ ತಂಡ ಪ್ರತ್ಯೇಕವಾಗಿ ಭೇಟಿಯಾಗಿ ಮನವಿ ಪತ್ರ ಅರ್ಪಿಸಿದೆ.

ಸ್ಥಳೀಯ ಸಂಸ್ಥೆಗಳ ಮೊದಲ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಡಳಿತ ಅವಧಿ ಪೂರ್ಣಗೊಂಡು ಹಲವು ತಿಂಗಳುಗಳಾಗಿವೆ. ಆದರೆ ಇಲ್ಲಿಯವರೆಗೂ ಎರಡನೇ ಹಂತದ ಅಧ್ಯಕ್ಷ – ಉಪಾಧ‍್ಯಕ್ಷರ ಆಯ್ಕೆಗೆ ಮೀಸಲಾತಿ ಪ್ರಕಟಗೊಳಿಸಿಲ್ಲ. ಇದರಿಂದ ಚುನಾಯಿತ ಪ್ರತಿನಿಧಿಗಳ ಹಕ್ಕು ಮೊಟಕುಗೊಳಿಸಿದಂತಾಗಿದೆ ಎಂದು ದೂರಿದ್ದಾರೆ.

ಸ್ಥಳೀಯ ಸಂಸ್ಥೆಗಳ ಆಡಳಿತದ ಮೀಸಲು ವಿಳಂಬದಿಂದ, ಅವಧಿ ಮುಗಿದು ವರ್ಷಗಳಾದರೂ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆದಿಲ್ಲಲ್ಲವಾಗಿದೆ ಎಂದು ಇದೇ ವೇಳೆ ಡಿ.ಎಸ್.ಅರುಣ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಕ್ಷಣವೇ ಕಾಲಮಿಯೊಳಗೆ ನಗರ-ಪಟ್ಟಣ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ಪ್ರಕಟಿಸಿ ಚುನಾವಣೆಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ವಿಧಾನ ಪರಿಷತ್ ಶಾಸಕರಾದ ಸುಜಾ ಕುಶಾಲಪ್ಪ, ಕೆ.ಎಸ್ ನವೀನ್, ಪಿ.ಹೆಚ್.ಪೂಜಾರ್, ಪ್ರದೀಪ್ ಶೆಟ್ಟರ್ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *